11:38 AM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಪಂ ಇಒ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳ ಬಂಧನ ಆಗ್ರಹಿಸಿ ಮತ್ತೆ ಪ್ರತಿಭಟನೆ, ರಸ್ತೆ ತಡೆ

19/02/2022, 19:31

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕು ಪಂಚಾಯಿತಿ ಇಒ ಮಡುಗಿನ ಬಸಪ್ಪ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳದಿರುವುದು ಈಗ ಜಾತಿ ಸಂರ್ಘದ ಹಾದಿ ಹಿಡಿದಿದೆ.

ನಾಯಕ ಸಮುದಾಯ, ನಾಯಕ ನೌಕರರ ಸಂಘ, ಕರ್ನಾಟಕ ರೈತರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬೃಹತ್ ಪ್ರತಿ ಭಟನೆ ನಡೆಸಿ ರಸ್ತೆ ತಡೆ ನಡಿಸಿ ಕರ್ತವ್ಯ ನಿರ್ವಹಿಸುವ ವೇಳೆ ಕಚೇರಿಗೆ ನುಗ್ಗಿ ಹಲ್ಲೆ ಮಾಡಿದ ಬಿಜೆಪಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಬಸವರಾಜ್, ಡಿ.ವಿ.ಕೆ.ಸ್ವಾಮಿ, ಎಂ. ನಾಗರಾಜು ಅವರು


ಹಲ್ಲೆ ಮಾಡಿದ ವೀಡಿಯೋಗಳು ಸಾಮಾಜಿಕ ಜಾಲತಾಣ, ದೃಶ್ಯಮಾಧ್ಯಮ, ಪತ್ರಿಕೆಗಳಲ್ಲಿ ಪ್ರಸಾರ ಮಾಡಿದರೂ ಅವರ ರಕ್ಷಣೆ ಮುಂದಾಗಿರುವುದನ್ನು ಪ್ರತಿಭಟಿಸಲಾಯಿತು.

ತಕ್ಷಣ ಆರೋಪಿಗಳನ್ನು ಬಂಧಿಸಿ ಗಡಿಪಾರು ಪಾಡುವಂತೆ ನಾಯಕ ಸಮುದಾಯದ ಮುಖಂಡರು ಆಗ್ರಹಿಸಿದರು.

ಮಾಜಿ ಶಾಸಕ ನೇರಲಗುಂಟೆ ಎಸ್.ತಿಪ್ಪೇಸ್ವಾಮಿ ಪ್ರತಿಭನೆಯಲ್ಲಿ ಭಾಗವಹಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದರೂ ಡಬಲ್ ಇಂಜಿನ್ ಎಂದು ಹೇಳಿ ಕೊಳ್ಳುತ್ತಿದ್ದು ಅಭಿವೃದ್ಧಿಯಲ್ಲಿ ಶೂನ್ಯವಾಗಿದೆ. ಚಳ್ಳಕೆರೆ ಹಾಗೂ ಮೊಳಕಾಲ್ಮೂರು ಬರಪೀಡಿತ ಪ್ರದೇಶಗಳೆಂದು ಹಣೆ ಪಟ್ಟಿ ಕಟ್ಟಿಕೊಂಡಿದ್ದರೂ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ನೀಡಿದೆ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು  ಅಧಿಕಾರಿಗಳ ಬೇಕಾಬಿಟ್ಟಿ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ.

ಆಧಿಕಾರಿಗಳು ಜನಪ್ರತಿನಿಧಿಗಳ ಇಷ್ಟದಂತೆ ಕಾರ್ಯ ನಿರ್ವಹಿಸದಿದ್ದರೆ, ಇಲ್ಲವೆ ಅವರ ಇಚ್ಛೆಗೆ ವಿರುದ್ಧವಾಗಿ ನಡೆದುಕೊಂಡ ಸಂದರ್ಭಗಳಲ್ಲಿ ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತದೆ. ಇದೀಗ

ಪೊಲೀಸ್ ಇಲಾಖೆ ಸಹ ಬಿಜೆಪಿ ಸರಕಾರದ ಒತ್ತಡಕ್ಕೆ ಮಣಿದು ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಹಿಂದೇಟು ಹಾಕುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.

ರೈತ ಮುಖಂಡ ಕೆ.ಪಿ.ಭೂತಯ್ಯ ಮಾತನಾಡಿ ಸರಕಾರಿ ಅಧಿಕಾರಿಗಳು ಒಂದು ಸ್ಥಳದಲ್ಲಿ ಕನಿಷ್ಠ ಎರಡು ವರ್ಷ ಕೆಲಸ ಮಾಡಲು ಅವಕಾಶ ನೀಡಬೇಕು ಎಂಬ ಮಾರ್ಗದರ್ಶಿ ಸೂತ್ರವನ್ನು ಅಳವಡಿಸಲಾಗಿದೆ. ಸರಕಾರ ಇದನ್ನು ಗೌರವಿಸಬೇಕು. ಇದರಿಂದ ಸರಕಾರಿ ಕೆಲಸಗಳೂ ಸರಾಗವಾಗಿ, ಅಬಾಧಿತವಾಗಿ ನಡೆದುಕೊಂಡು ಹೋಗುವುದು ಸುಲಭವಾಗುತ್ತದೆ. ಆದರೆ ಅಧಿಕಾರಿಗಳು ತಪ್ಪು ಮಾಡಿದಾಗ, ಕೆಲಸ ಮಾಡದೆ ಇದ್ದಾಗ ಮೇಲಾಧಿಕಾರಿಗಳಿಗೆ ದೂರು ನೀಡಲಿ, ಪ್ರತಿಭಟನೆ ಮಾಡಲಿ ಅದು ಬಿಟ್ಟು ತಾಲೂಕು ಮಟ್ಟದ ಅಧಿಕಾರಿ ಮೇಲೆ ಹಲ್ಲೆ ಕಚೇರಿಯಲ್ಲಿ ಪೀಠೋಪಕರಣಗಳನ್ನು ದ್ವಂಸ ಮಾಡಿದ್ದರೂ ಸಹ ಇನ್ನು ಅವರನ್ನು ಬಂಧಿಸಲು ಸರಕಾರ ಹಾಗೂ ಅಧಿಕಾರಿಗಳು ಮುಂದಾಗುತ್ತಿಲ್ಲ. ಕೂಡಲೆ ಅವರನ್ನು ಬಂಧಿಸದಿದ್ದರೆ ಹೋರಾಟ ತೀವ್ರಗೊಳ್ಳಲಿದೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠಕಲಿಸಲಿದ್ದಾರೆ ಎಂದು ಸರಕಾರದ ವಿರುದ್ದ ಕಿಡಿಕಾರಿದರು.

ಪ್ರತಿಭಟನೆಯಲ್ಲಿ ನಾಯಕನಹಟ್ಟಿ, ಪರಶುರಾಂಪುರ ಸೇರಿದಂತೆ ವಿವಿಧ ಕಡೆಗಳಿಂದ ನಾಯಕ ಸಮುದಾಯದವರು  ಬಸ್ ಗಳನ್ನು ಮಾಡಿಕೊಂಡು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು