7:38 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡದೆ ತಾಲೂಕು ಆಡಳಿತ ನಿರ್ಲಕ್ಷ್ಯ: ದಲಿತ ಮುಖಂಡರ ಟೀಕೆ

27/11/2021, 08:58

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಸರ್ವರಿಗೂ ಸಮಾನತೆ ಒದಗಿಸಿ ಮೂಲಭೂತ ಹಕ್ಕುಗಳನ್ನು ನೀಡಿದ ಸಂವಿಧಾನ ರಚಿಸಿದ ಅಂಬೇಡ್ಕರ್ ಪ್ರತಿಮೆಗೆ ತಾಲೂಕು ಆಡಳಿತ ಮಾಲಾರ್ಪಣೆ ಮಾಡದೆ ನಿರ್ಲವಹಿಸಿದೆ ಎಂದು ದಲಿತ ಮುಖಂಡರು ತಹಶೀಲ್ದಾರ್ ವಿರುದ್ದ ಕಿಡಿ ಕಾರಿದ್ದಾರೆ.

ಭಾರತ ಸಂವಿಧಾನ ದಿನವನ್ನು ಪ್ರತಿ ವರ್ಷ ನವೆಂಬರ್ 26 ರಂದು ಆಚರಣೆ ಮಾಡಲಾಗುತ್ತಿದ್ದು ತಾಲೂಕು ಕಚೇರಿ ಎದುರಲ್ಲೇ ಇರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲು ತಾಲೂಕು ಆಡಳಿತ ನಿರ್ಲಕ್ಷವಹಿಸಿದೆ ಎಂದು ದಲಿತ ಮುಖಡಂರು ಅಂಬೇಡ್ಕರ್ ಪ್ರತಿಮೆ ಮುಂದೆ ವಿರೋದ ವ್ಯಕ್ತಪಡಿಸಿದ್ದಾರೆ.

ದಲಿತ ಮುಖಂಡರು ವಿರೋಧ ವ್ಯಕ್ತಪಡಿಸಿದನಂತರ ಎಚ್ಚತ್ತ ತಾಲೂಕು ಆಡಳಿತ ಸಿಬ್ಬಂದಿಯನ್ನು ಕಳಿಸಿ ಸ್ವಚ್ಚತೆ ಮಾಡಲು ಮುಂದಾಗಿದ್ದಾರೆ. 

ಜಿಪಂ ಮಾಜಿ ಸದಸ್ಯ ಪ್ರಕಾಶ್ ಮಾತನಾಡಿ 1949 ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಸೆಲೆಬ್ರೇಟ್ ಮಾಡುತ್ತಿದ್ದೇವೆ.

ಭಾರತದಲ್ಲಿ ಸಂವಿಧಾನ ಅಂಗೀಕಾರವಾಗಿದ್ದು 1949ರ ನವೆಂಬರ್ 26ರಂದೇ ಆದರೂ ಅನುಷ್ಠಾನಕ್ಕೆ  ತಂದಿದ್ದು 1950ರ ಜನವರಿ 26 ರಂದು. ಈ ದಿನವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಣೆ ಮಾಡಲಾಗುತ್ತದೆ. ಭಾರತಕ್ಕೆ ಸಂವಿಧಾನವೇ ಬಹುದೊಡ್ಡ ಬಲ. ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ನಗರಸಭೆ ಉಪಾಧ್ಯಕ್ಷ ವಿಜಯ್‍ಕುಮಾರ್, ಎಸ್.ಎಚ್.ಸೈಯಾದ್, ಉಮೇಶ್ ಬ್ಯಾನರ್ಜಿ, ವಿನೋದ್ ಕುಮಾರ್,ಭದ್ರಿ, ಸಿ.ಶ್ರೀನಿವಾಸ್,ಡಿ.ಟಿ. ಭೂತಲಿಂಗಪ್ಪ, ಬೀಮಣ್ಣ, ನಾಗರಾಜ್, ಚಂದ್ರಪ್ಪ, ಅನಿಲ್ ಕುಮಾರ್,  ದಲಿತ  ಇತರರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು