11:57 AM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ

20/12/2024, 20:27

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ
ಚಳ್ಳಕೆರೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆಸಲಾಯಿತು.
ಪೂರ್ವಭಾವಿ ಸಭೆಗೆ ರಾಜ್ಯ ಅಧ್ಯಕ್ಷ ಹಾಗೂ ಸಂಸ್ಥಾಪಕರಾದ ಸುನಿಲ್ ಎಂ. ಎಸ್. ಅವರು ಆಗಮಿಸಿದ್ದರು. ಪೂರ್ವಭಾವಿ ಸಭೆಯ ಉದ್ದೇಶ ದಿನೇ ದಿನೇ ಕರ್ನಾಟಕ ಯುವ ರಕ್ಷಣಾ ವೇದಿಕೆ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದೆ. ಹಾಗೆ ಇಂದು ಚಳ್ಳಕೆರೆ ತಾಲೂಕಿನಲ್ಲಿ 66 ಜನ ಸಂಘಟನೆಗೆ ಸೇರಿದ್ದಾರೆ ಮತ್ತು ಸಂಘಟನೆಯ ಮಹತ್ವ ಉದ್ದೇಶಗಳು ಯಾವ ರೀತಿ ನಾವು ಸಬಲೀಕರಣ ಆಗಬೇಕು. ಅನ್ಯಾಯ ವಿರುದ್ಧ ಯಾವ ರೀತಿ ಧ್ವನಿ ಎತ್ತಬೇಕು, ಸಂಘಟನೆಯಿಂದ ಆಗುವ ಅನುಕೂಲಗಳು ಯಾವ ರೀತಿ ನಾವು ಬಳಸಿಕೊಳ್ಳಬೇಕು ಎಂದು ಮಹತ್ವವಾದ ಅಂಶಗಳನ್ನು ತಿಳಿಸಿಕೊಟ್ಟರು. ಕರ್ನಾಟಕ ಯುವ ರಕ್ಷಣಾ ವೇದಿಕೆಯ ಕನ್ನಡ ಮಾಧ್ಯಮ24/7 ಚಾನಲ್ ಸದ್ಯದಲ್ಲೇ ಬಿಡುಗಡೆ ಆಗುತ್ತೆ ರಾಜ್ಯಾದ್ಯಂತ ಅದನ್ನು ಉತ್ತಮವಾಗಿ ಬಳಸಿಕೊಳ್ಳಿ ಎಂದು ಸಭೆಯನ್ನು ಉದ್ದೇಶಿಸಿ ಹೇಳಿದರು.
ಸಭೆಗೆ ಜಿಲ್ಲಾಧ್ಯಕ್ಷರಾದ ಮೋಹನ್ ಕುಮಾರ್, ತಾಲೂಕು ಅಧ್ಯಕ್ಷರಾದ ಮೈಲಾರ ಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಹಾಲೇಶ್ ಯಾದವ್, ಬೆಳಗೆರೆ ತಾಲೂಕು ಕಾರ್ಯಾಧ್ಯಕ್ಷ ಶಿವಪುತ್ರ, ತಾಲೂಕು ನಗರ ಘಟಕದ ಅಧ್ಯಕ್ಷರಾದ ಮಾರುತಿ ಇನ್ನು ಮುಂತಾದ ಅನೇಕ ಪದಾಧಿಕಾರಿಗಳು, ಉಪಾಧ್ಯಕ್ಷರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು