9:41 AM Thursday11 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

26/04/2024, 21:56

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ ನಡೆದಿದ್ದು, ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.
ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಯಶೋಧಮ್ಮ ಅವರು ಲೋ ಬಿಪಿಯಿಂದ ಮೃತಪಟ್ಟಿದ್ದಾರೆ. 55ರ ಹರೆಯದ ಯಶೋಧಮ್ಮ ಅವರು ಚಳ್ಳಕೆರೆ ಪಟ್ಟಣದ ವಿಠಲ ನಗರದ ನಿವಾಸಿ.
ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೆ ಚಳ್ಳಕೆರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿ ಮಧ್ಯದಲ್ಲೇ ಅವರು ಮೃತಪಟ್ಟರು. ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು