6:46 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಚಳ್ಳಕೆರೆ ಗೊಲ್ಲರಹಟ್ಟಿಯಲ್ಲಿ 1 ವರ್ಷದಿಂದ ಸ್ಥಗಿತಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭ

09/01/2025, 17:25

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka.com

ಚಳ್ಳಕೆರೆ ತಾಲೂಕಿನ ಎಲಗಟ್ಟೆ ಗೊಲ್ಲರಹಟ್ಟಿ ಗ್ರಾಮದ ಊರಿನಲ್ಲಿ ಕಳೆದ ಒಂದು ವರ್ಷದಿಂದ ನಿಂತು ಹೋಗಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭಗೊಂಡಿದೆ‌.
ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ಸುನಿಲ್ ಅವರ ಪರಿಶ್ರಮದ ಫಲವಾಗಿ ಘಟಕ ಕಾರ್ಯಾರಂಭ ಮಾಡಿದೆ.
ನಿಂತು ಹೋಗಿದ್ದು ಘಟಕದ ಕುರಿತು ಸ್ಥಳೀಯ ಯುವಕರು ಅನೇಕ ಬಾರಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಪಿಡಿಒಗಳಿಗೆ ಮನವಿ ಮಾಡಿದ್ದರು. ಆದರೆ ಅವರು ಸ್ಪಂದಿಸದ ಕಾರಣ ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಸುನಿಲ್ ಸರ್ ಅವರ ನೇತೃತ್ವದಲ್ಲಿ ಹಾಗೂ ಚಳ್ಳಕೆರೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನಾ ಮುಖ್ಯಸ್ಥರಿಂದ ತಾಲೂಕು ಪಂಚಾಯತಿ ಮುಖ್ಯಸ್ಥರಾದ ಶಶಿಧರ ಅವರಿಗೆ ಕುಡಿಯುವ ನೀರಿನ ಶುದ್ಧ ಘಟಕವನ್ನು ಆದಷ್ಟು ಬೇಗ ಮರು ಸ್ಥಾಪನೆ ಆಗಬೇಕು. ಗ್ರಾಮದಲ್ಲಿ ನೆಗಡಿ ಶೀತ ಕೆಮ್ಮು ಹೆಚ್ಚಾಗಿದ್ದು ಶುದ್ಧ ನೀರಿನ ಘಟಕ ಮತ್ತೆ ಚಾಲ್ತಿಯಾಗಬೇಕೆಂದು ಮನವಿ ಸಲ್ಲಿಸಲಾಯಿತು. ಈ ಮನವಿಗೆ ಸ್ಪಂದಿಸಿದ ತಾಲೂಕು ಪಂಚಾಯತಿ ಮುಖ್ಯಸ್ಥರು ತ್ವರಿತವಾಗಿ ಇಂದು ಶುದ್ಧ ನೀರಿನ ಘಟಕಕ್ಕೆ ಹೊಸ ಉತ್ಪನ್ನಗಳ ಅಳವಡಿಸಿ ಮರುಸ್ಥಾಪನೆ ಮಾಡುವಲ್ಲಿ ಸಫಲರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು