1:58 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌ ಕಿತ್ತ ತೆಗೆದ ದುಷ್ಕರ್ಮಿಗಳು

16/11/2025, 16:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ–ಚಾರ್ಮಾಡಿ ಘಾಟ್‌ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ದೇವನಗುಲ್‌ ಗ್ರಾಮದ ಅಡ್ಡದಾರಿ ಇತ್ತೀಚೆಗೆ ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದ್ದ ಹಿನ್ನೆಲೆಯಲ್ಲಿ, ಪೊಲೀಸರ ಮಾರ್ಗದರ್ಶಕ ಕಾರ್ಯಾಚರಣೆಯಡಿ ಅಳವಡಿಸಿದ್ದ 12 ಅಡಿ ಉದ್ದದ ಬಲಿಷ್ಠ ಗೇಟನ್ನು ದುಷ್ಕರ್ಮಿಗಳು ಕಿತ್ತು ತೆಗೆದಿದ್ದಾರೆ.
ರಾತ್ರಿ ವೇಳೆ ಸಂಚಾರ ಸಂಪೂರ್ಣ ನಿಲ್ಲಿಸುವ ಮೂಲಕ ಈ ಗೇಟು ಭದ್ರತೆ ಬಲಪಡಿಸಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ, ಬಣಕಲ್ ಠಾಣಾ ಪಿಎಸ್‌ಐ ರೇಣುಕಾ ನೇತೃತ್ವದ ಪೊಲೀಸರು ರಸ್ತೆ ಎರಡೂ ಬದಿಗಳಲ್ಲಿ ಗುಂಡಿ ತೋಡಿ, ಗೇಟ್‌ನ ಕೀಲಿಯನ್ನು ಚೆಕ್‌ಪೋಸ್ಟ್ ಸಿಬ್ಬಂದಿ ವಶದಲ್ಲಿ ಇಟ್ಟು ನಿರ್ವಹಣೆ ಮಾಡುತ್ತಿದ್ದರು. ಆದರೆ ನಿನ್ನೆ ರಾತ್ರಿ ದುಷ್ಕರ್ಮಿಗಳು ಗೇಟ್‌ನ್ನು ಅಡಿಪಾಯದಿಂದಲೇ ಕಿತ್ತ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯ ಕಳ್ಳಸಾಗಾಣಿಕೆಗೆ ದಾರಿ ಮಾಡಿಕೊಡಲು ನಡೆದಿರಬಹುದೆಂಬ ಅನುಮಾನ
ಕಾಣುತ್ತಿದೆ.


ಪೊಲೀಸರು–ಗ್ರಾಮಸ್ಥರು ಸೇರಿ ಹಾಕಿದ್ದ ಭದ್ರತಾ ವ್ಯವಸ್ಥೆಗೆ ಈ ಕೃತ್ಯ ಗಂಭೀರ ಸವಾಲಾಗಿದ್ದು, ಸ್ಥಳದಲ್ಲಿ ತನಿಖೆ ತೀವ್ರಗೊಳಿಸಲಾಗಿದೆ. “ಸುರಕ್ಷತೆಗೆ ಕೈಗೊಂಡ ಕ್ರಮಗಳನ್ನು ಹಾಳುಮಾಡುವ ಪ್ರಯತ್ನ ಯಾರಿಂದಾದರೂ ನಡೆದರೆ ಕಠಿಣ ಕ್ರಮ ಅನಿವಾರ್ಯ,” ಎಂದು ಬಣಕಲ್ ಪಿ ಎಸ್.ಐ.ರೇಣುಕಾ ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆಗಳನ್ನು ಶಾಶ್ವತವಾಗಿ ತಡೆಯಲು ಪೊಲೀಸರು ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು