10:42 PM Tuesday18 - March 2025
ಬ್ರೇಕಿಂಗ್ ನ್ಯೂಸ್
Farmers Loan | ಅರ್ಹತೆ ಇರುವ ರೈತ ಫಲಾನುಭಗಳಿಗೆ ಸಾಲ ಸೌಲಭ್ಯ: ವಿಧಾನ… ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕ… Water Dispute | ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ… ಯುವನಿಧಿ ಯೋಜನೆ; ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಚಾರಕ್ಕೆ ಕ್ರಮ: ಸಚಿವ ಡಾ. ಶರಣಪ್ರಕಾಶ್… Education | ದೈಹಿಕ ಶಿಕ್ಷಕರ ಸಹ ಶಿಕ್ಷಕರೆಂದು ಪರಿಗಣಿಸುವ ಕುರಿತು ಪರಿಶೀಲನೆ: ಶಿಕ್ಷಣ… Solar power & Wind power | ಸೌರ ಶಕ್ತಿ ಮತ್ತು ಪವನ… Legislative Council | ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ಆರೋಗ್ಯ ಸಚಿವ… KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು,… Education Department | ಕನ್ನಡ ಬೋಧಿಸದ ಕೇಂದ್ರ ಪಠ್ಯಕ್ರಮ ವಿರುದ್ಧ ಕ್ರಮಕ್ಕೆ ಮುಂದಾಗಿ:… ಬಿಜೆಪಿ ತರಹ ಕೇವಲ 10% ಜನರ ಕೈಹಿಡಿದು ಶೇ. 90% ಜನರನ್ನು ಕೈಬಿಟ್ಟಿಲ್ಲ:…

ಇತ್ತೀಚಿನ ಸುದ್ದಿ

Chalukya Festival | ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಣೆಗೆ ರಾಜ್ಯ ಸರಕಾರ ತೀರ್ಮಾನ

18/03/2025, 22:35

ಬೆಂಗಳೂರು(reporterjarnataka.com): ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ‌ ಕೈಗೊಳ್ಳಲಾಗಿದೆ.
ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರ ನೇತೃತ್ವದಲ್ಲಿ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಮಂಗಳವಾರ ವಿಕಾಸಸೌಧದಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ಸಚಿವರು, 2015ರ ನಂತರ ಚಾಲುಕ್ಯ ಉತ್ಸವ ಆಚರಣೆ ನಡೆದಿಲ್ಲ. ಇತರ ಉತ್ಸವಗಳಂತೆ ಚಾಲುಕ್ಯ ಉತ್ಸವವೂ ಆಚರಣೆ ಆಗುವ ಬದಲಿಗೆ ಇದನ್ನೊಂದು ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಉತ್ಸವವನ್ನಾಗಿ ರೂಪಿಸಬೇಕು. ಇಡೀ ರಾಷ್ಟ್ರದ ಗಮನ ಸೆಳೆಯುವಂತೆ ಉತ್ಸವ ಆಚರಣೆಯಾಗಬೇಕು ಎಂದು ಹೇಳಿದರು.
ಉತ್ಸವದಲ್ಲಿ ಸಂಗೀತ, ನೃತ್ಯ ಹಾಗೂ ಜಾನಪದ ಕಲಾ ವೈಭವಗಳನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ಆಯೋಜನೆಯಾಗಲಿದೆ ಎಂದು ತಿಳಿಸಿದರು.
ಮೂರು ದಿನಗಳ ಕಾಲ ನಡೆಯಲಿರುವ ಉತ್ಸವಕ್ಕೆ ಬಾದಾಮಿಯಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಎರಡನೇ ದಿನ ಪಟ್ಟದಕಲ್ಲು ಹಾಗೂ ಸಮಾರೋಪ ಸಮಾರಂಭ ಐಹೊಳೆಯಲ್ಲಿ ನಡೆಯಲಿದೆ.‌ ವರ್ಷಾಂತ್ಯಕ್ಕೆ‌ ಉತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ಮುಂದಿನ‌ ಸಭೆಯಲ್ಲಿ ದಿನಾಂಕವನ್ನು ನಿಗದಿಪಡಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಶಾಸಕ‌ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ಇಮ್ಮಡಿ ಪುಲಿಕೇಶಿ ಕರ್ನಾಟಕದ ಚರಿತ್ರೆಯಲ್ಲಿ ತನ್ನ ಶೌರ್ಯ, ಸಾಹಸ ಹಾಗೂ ಕಲಾವಂತಿಕೆ ಮುಂತಾದ ಸಂಗತಿಗಳಿಂದಾಗಿ ಅಜರಾಮರನಾಗಿದ್ದನು. ಇಮ್ಮಡಿ ಪುಲಿಕೇಶಿಯ ಚರಿತ್ರೆಯನ್ನು ಉತ್ಸವದಲ್ಲಿ ಸಾರುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಅಬಕಾರಿ ಸಚಿವರೂ ಆದ ಬಾಗಲಕೋಟೆ ಜಿಲ್ಲಾ‌ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಮಾಜಿ ಸಚಿವ‌ ಎಚ್.ವೈ.ಮೇಟಿ, ವಿಧಾನ ಪರಿಷತ್ ಸದಸ್ಯರಾದ ಹನುಮಂತ ನಿರಾಣಿ, ಪಿ.ಎಚ್.ಪೂಜಾರ್,‌ ಉಮಾಶ್ರೀ‌, ಇಲಾಖೆ ನಿರ್ದೇಶಕಿ ಗಾಯಿತ್ರಿ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು