3:22 AM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಚಾಮರಾಜಪೇಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ: ಮಕ್ಕಳ ಜತೆ ಭೋಜನ

06/07/2024, 10:04

ಬೆಂಗಳೂರು(reporterkarnataka.com): ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಎಸ್‌ಸಿಸಿಪಿ/ಟಿ.ಎಸ್.ಪಿ ರಾಜ್ಯ ಅಭಿವೃದ್ದಿ ಪರಿಷತ್‌ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್‌ ಸಹ ನೀಡುತ್ತಿದ್ದೇವೆ ಎಂದು ಹೇಳಿದರು.
ಚಾಮರಾಜಪೇಟೆಯ ಸರ್ಕಾರಿ ಶಾಲೆಯನ್ನು ಪಡೆದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ವಿದ್ಯಾರ್ಥಿಗಳ ಜತೆಯಲ್ಲಿ ಮಾಡಿದ ಊಟ, ಸಾಂಬಾರ್ ಚೆನ್ನಾಗಿತ್ತು‌ ಎಂದು ಅವರು ಈ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು