5:55 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Chamarajanagara | ಸಂಪುಟ ಸದಸ್ಯರು ದೇವಾಲಯಕ್ಕೆ: ಸಚಿವ ಮಹದೇವಪ್ಪ ಬುಡಕಟ್ಟು ಸಮುದಾಯಗಳ ಕಾಲೋನಿಗಳಿಗೆ ಭೇಟಿ

25/04/2025, 11:28

ಮಲೆಮಹದೇಶ್ವರಬೆಟ್ಟ(reporterkarnataka.com): ನಾಡಿನ ಐತಿಹಾಸಿಕ ತಾಣವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯುತ್ತಿದ್ದು ಇಡೀ ಸರ್ಕಾರವೇ ಚಾಮರಾಜನಗರದ ಮಹದೇಶ್ವರ ಬೆಟ್ಟದಲ್ಲಿ ಬೀಡು ಬಿಟ್ಟಿದೆ.


ಸಹಜವಾಗಿ ಇಲ್ಲಿಗೆ ಆಗಮಿಸಿದ ಸಚಿವರೆಲ್ಲರೂ ಕೂಡಾ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆಯುವುದು ವಾಡಿಕೆ. ಇಂದು ಸಚಿವರೆಲ್ಲಾ ಒಬ್ಬೊಬ್ಬರಾಗಿ ಮಹದೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯುತ್ತಿರುವ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್. ಸಿ. ಮಹದೇವಪ್ಪನವರು ಇದಕ್ಕೆ ವಿಭಿನ್ನವಾಗಿ ಬೆಟ್ಟಕ್ಕೆ ಹತ್ತಿರ ಇರುವ ಬುಡಕಟ್ಟು ಸಮುದಾಯಗಳ ಜನತಾ ಕಾಲೋನಿಗೆ ಭೇಟಿ ನೀಡಿ, ಸಂಕಷ್ಟಗಳನ್ನು ಆಲಿಸುವ ಮೂಲಕ ಮಾದರಿ ಆಗಿದ್ದಾರೆ.
ಸುಮಾರು ಒಂದು ಗಂಟೆಯ ಕಾಲ ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸಿದ ಸಚಿವರು, ಜನತಾ ದೇವಾಲಯಕ್ಕೆ ತೆರಳಿ ಅವರನ್ನು ಆಲಿಸಿದ್ದು ಅತ್ಯಂತ ವಿಶೇಷವಾಗಿತ್ತು.
ಈ ಬಗ್ಗೆ ಮಾಧ್ಯಮ ಮಿತ್ರರು ಪ್ರಶ್ನೆ ಕೇಳಲಾಗಿ, ದೇವಸ್ಥಾನಕ್ಕಿಂತಲೂ ಜನರ ಬಳಿ ಹೋಗುವುದು ಹೆಚ್ಚು ಪೂರಕವಾದಂತ ಸಂಗತಿಯಾಗಿದ್ದು, ಜನರ ಮಾತುಗಳೇ ದೈವದ ಮಾತಾಗಿದೆ ಎಂದು ಹೇಳುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು