7:49 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಚಾಮುಂಡಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣ ಬೇಡ, ಅದು ಶ್ರದ್ಧಾ ಕೇಂದ್ರವಾಗೇ ಉಳಿಯಲಿ: ಎಂದ ಸಂಸದ ಪ್ರತಾಪ್‌ ಸಿಂಹ

07/07/2022, 10:53

ಮೈಸೂರು(reporterkarnataka.com): ಚಾಮುಂಡಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣಮಾಡಿದರೆ ಅದು ಪ್ರವಾಸಿಗರ ತಾಣವಾಗಿಬಿಡುವ ಆತಂಕವಿದೆ. ಹಾಗಾಗಬಾರದು. ಚಾಮುಂಡಿ ಬೆಟ್ಟವು ತಾಯಿ ಚಾಮುಂಡೇಶ್ವರಿಯ ಕ್ಷೇತ್ರ, ಅನೇಕ ಶ್ರದ್ಧಾಳುಗಳು ತಾಯಿಯ ಆಶೀರ್ವಾದ ಪಡೆಯಲು ಇಲ್ಲಿಗೆ ಬರುತ್ತಾರೆ. ಹಾಗಾಗಿ ಚಾಮುಂಡಿ ಬೆಟ್ಟವು ಶ್ರದ್ಧಾ ಕೇಂದ್ರವಾಗೇ ಉಳಿಯಬೇಕು. ಈ ಹಿನ್ನೆಲೆಯಲ್ಲಿ ರೋಪ್‌ ವೇ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಲಾಗಿದೆ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಅವರು “ಚಾಮುಂಡಿ ಬೆಟ್ಟವು ಶ್ರದ್ಧಾ ಕೇಂದ್ರವಾಗೇ ಉಳಿಯಲಿ. ಹಾಗಾಗಿ ರೋಪ್‌ವೇ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಲಾಗಿದ್ದು ಶಾಸಕ ಜಿಟಿ ದೇವೇಗೌಡರು ಹಾಗೂ ಸಚಿವ ಎಸ್‌ಟಿ ಸೋಮಶೇಖರ್‌ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲಯಲ್ಲಿ ರೋಪ್‌ವೇ ನಿರ್ಮಾಣವನ್ನು ಕೈ ಬಿಡಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು