10:53 AM Thursday2 - October 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ… ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ತನಿಖಾ ವರದಿಗೆ ಬಿ ರಿಪೋರ್ಟ್ ಕಾಂಗ್ರೆಸ್‌ ಸರ್ಕಾರ 80 ಪರ್ಸೆಂಟ್‌ ಕಮಿಶನ್‌ ಪಡೆಯುತ್ತಿದೆ, ಸಿಎಂ ರಾಜೀನಾಮೆ ನೀಡಲಿ: ಪ್ರತಿಪಕ್ಷ… ಮಡಿಕೇರಿ ಸಾರಿಗೆ ಬಸ್‌ ಡಿಪೋ ಎದುರು ನಿರ್ಮಿಸಲಾದ ಅನಧಿಕೃತ ಶೆಡ್‌ ತೆರವಿಗೆ ನಗರಸಭೆ…

ಇತ್ತೀಚಿನ ಸುದ್ದಿ

ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

02/10/2025, 10:51

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಮೈಸೂರು ಸಂಪೂರ್ಣವಾಗಿ ಸಜ್ಜಾಗಿದ್ದು, ಐತಿಹಾಸಿಕ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ವಿಜಯದಶಮಿ ದಿನವಾದ ಇವತ್ತು ಗುರುವಾರ ನಡೆಯುವ ಐತಿಹಾಸಿಕ ವಿಜಯದಶಮಿ ಮೆರವಣಿಗೆಯನ್ನು ನೋಡಲು ಲಕ್ಷಾಂತರ ಮಂದಿ ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ದೇಶ ವಿದೇಶಗಳಿಂದ ಲಕ್ಷಾಂತರ ಜನರು ಮೈಸೂರಿಗೆ ಲಗ್ಗೆ ಇಟ್ಟಿದ್ದಾರೆ.
ಅಂಬಾರಿಯಲ್ಲಿ ಇರಿಸಲಾಗುವ ಚಾಮುಂಡಿ ತಾಯಿಯ ಉತ್ಸವಮೂರ್ತಿ ಚಾಮುಂಡಿ ಬೆಟ್ಟದಿಂದ 8 ಗಂಟೆಗೆ ಹೊರಬಂದು ಮೆರವಣಿಗೆ ಮೂಲಕ ಅರಮನೆಯತ್ತ ಸಾಗಿದ್ದು ಬೆಳಿಗ್ಗೆ 10:15 ಕ್ಕೆ ಅರಮನೆಯಲ್ಲಿ ಉತ್ತರ ಪೂಜೆ ಆರಂಭವಾಗಲಿದೆ.
ಇನ್ನು 10:10ಕ್ಕೆ ಅರಮನೆಯ ಸವಾರಿ ತೊಟ್ಟಿಯಲ್ಲಿ ಜಟ್ಟಿ ಕಾಳಗ ನಡೆಯಲಿದೆ.
ಜಟ್ಟಿಕಾಳಗ ಮುಗಿದ ಬಳಿಕ, 10:50ಕ್ಕೆ ಅರಮನೆ ಆವರಣದಿಂದ ಭುವನೇಶ್ವರಿ ದೇವಸ್ಥಾನಕ್ಕೆ ವಿಜಯಯಾತ್ರೆ ಹೊರಡಲಿದ್ದು, ಬನ್ನಿಪೂಜೆ ಬಳಿಕ ಸ್ವಸ್ಥಾನಕ್ಕೆ ವಾಪಸ್ ಆಗಲಿದೆ. ಅಂತಿಮವಾಗಿ ಬಳಿಕ‌ ಯದುವೀರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.
ನಂದಿಧ್ವಜ ಪೂಜೆ ನಂತರ ಮೆರವಣಿಗೆ ಮಧ್ಯಾಹ್ನ 1ರಿಂದ 1.18 ರೊಳಗೆ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂಬೂಸವಾರಿಗೆ ನಾಂದಿ ಹಾಡುವರು.
ಸಂಜೆ 4.42 ರಿಂದ 5.06 ರೊಳಗೆ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಹೊತ್ತು ತರುವ ಶ್ರೀ ಚಾಮುಂಡೇಶ್ವರಿ ದೇವಿ ಉತ್ಸವಮೂರ್ತಿಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಲಿದ್ದಾರೆ.
ಈ ಬಾರಿಯೂ ಸುಮಾರು ಎರಡು ಗಂಟೆಗಳ ಕಾಲ ತಡವಾಗಿ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಹೊರಡಲಿದ್ದಾನೆ. ಇದು 6ನೇ ಬಾರಿಗೆ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಜಂಬೂಸವಾರಿ ಹಿನ್ನೆಲೆಯಲ್ಲಿ ಅರಮನೆ ಅಂಗಳದಲ್ಲಿ 45 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.
ಜಂಬೂ ಸವಾರಿಯ ನಂತರ ರಾತ್ರಿ 7 ಗಂಟೆಗೆ ಬನ್ನಿಮಂಪಟದಲ್ಲಿ ಪಂಜಿನ ಕವಾಯತು ಇರಲಿದೆ. ಇದರೊಂದಿಗೆ ದಸರಾ ಆಚರಣೆಯು ಅಂತ್ಯವಾಗಲಿದೆ.

*ಅಭಿಮನ್ಯು ಜೊತೆಗೆ 14 ಆನೆಗಳ ಪಡೆ:*
ಈ ಬಾರಿ ಕ್ಯಾಪ್ಟನ್ ಅಭಿಮನ್ಯು ಜೊತೆ ಒಟ್ಟು 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ. ಕುಮ್ಕಿ ಆನೆಗಳಾದ ಕಾವೇರಿ ಹಾಗೂ ರೂಪ ಗಜಪಡೆ ಕ್ಯಾಪ್ಟನ್ ಅಭಿಮನ್ಯು ಜೊತೆಗೆ ಹೆಜ್ಜೆ ಹಾಕಲಿವೆ. ನಿಶಾನೆ ಆನೆಯಾಗಿ ಧನಂಜಯ, ನೋಪತ್ ಆನೆಯಾಗಿ ಗೋಪಿ ಕರ್ತವ್ಯ ನಿರ್ವಹಿಸಲಿವೆ.

*ಪಾಸ್‌ ಇಲ್ಲದವರಿಗೆ ಪ್ರವೇಶವಿಲ್ಲ:*
ವಿಜಯದಶಮಿ ಹಾಗೂ ಪಂಜಿನ ಕವಾಯತು ಗೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ‌ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ಹಾಗೂ ಪಂಜಿನ ಕವಾಯತು ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಹಲವು‌ ನಿಯಮಗಳನ್ನು ಜಾರಿ‌ ಮಾಡಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಕಡ್ಡಾಯವಾಗಿ ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಕ್ಕೆ ನಿಗದಿತ ಪಾಸ್ ಇರುವವರಿಗೆ ಮಾತ್ರ ಪ್ರವೇಶ ನೀಡಲಾಗುವುದು.
ಕಾರ್ಯಕ್ರಮಕ್ಕೆ ಬರುವವರು ನಿಗದಿತ ಸ್ಥಳದಲ್ಲೇ ತಮ್ಮ ವಾಹನಗಳನ್ನು ಪಾರ್ಕ್ ಮಾಡಬೇಕು. ಜಂಬೂ ಸವಾರಿ ಸಾಗುವ ರಸ್ತೆಯಲ್ಲಿ ಹಲವು ಶಿಥಿಲಗೊಂಡ ಕಟ್ಟಡಗಳಿದ್ದು ಈ ಬಾರಿ ಆ ಕಟ್ಟಡಗಳ ಮೇಲೆ ಕುಳಿತು ಮೆರವಣಿಗೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ.‌ ಯಾರು ಕಟ್ಟಡಗಳ‌ ಮೇಲೆ‌ ಹತ್ತಬಾರದು ಎಂದು ಖಡಕ್‌ ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು