11:43 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಬೆಂಗಳೂರಿಗೆ ಭೇಟಿ: ಭಾರೀ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸ್ವಾಗತ

13/01/2026, 18:43

ಬೆಂಗಳೂರು (reporterkarnataka.com): ಬೆಂಗಳೂರು ಭೇಟಿ ಸಂಬಂಧ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.


ಫೆಡರಲ್‌ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಮತ್ತು ಅವರ ನಿಯೋಗದವರನ್ನು ಭಾರೀ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ.ಪಾಟೀಲ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಮಯದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಡಾ.ಕೆ.ಜಿ. ಜಗದೀಶ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್,ಬೆಂಗಳೂರು ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿಗಳು ಹಾಗೂ ಜರ್ಮನಿ ಕಾನ್ಸೂಲೇಟ್ ಜನರಲ್ ನವದೆಹಲಿ ಕಚೇರಿಯ ಅಧಿಕಾರಿಗಳು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಫೆಡರಲ್‌ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಮತ್ತು ಅವರ ನಿಯೋಗವು ಇಂದು ಬೆಂಗಳೂರಿನ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಇಂದು ಸಂಜೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಪಸ್ಸಾಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು