7:50 AM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಚಂಡಮಾರುತ ಸಂತ್ರಸ್ತರಿಗೆ ಕುಳಾಯಿಯಲ್ಲಿ ಮಲ್ಟಿಪರ್ಪಸ್ ಸೈಕ್ಲೋನ್ ಶೆಲ್ಟರ್: ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

20/06/2021, 08:01

ಸಾಂದರ್ಭಿಕ ಚಿತ್ರ
ಮಂಗಳೂರು (reporterkarnataka news): ಚಂಡಮಾರುತದಿಂದ ತೊಂದರೆಗೊಳಗಾದವರಿಗೆ ಆಶ್ರಯ ನೀಡಲು ಕುಳಾಯಿಯಲ್ಲಿ ಮಲ್ಟಿಪರ್ಪಸ್ ಸೈಕ್ಲೋನ್ ಶೆಲ್ಟರ್ ಕೇಂದ್ರವನ್ನು ತೆರೆಯಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದನ್ನು ಶೀಘ್ರದಲ್ಲಿಯೇ ಮಂಜೂರಾತಿ ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಅವರು ಮುಖ್ಯಮಂತ್ರಿಯವರು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪೋಲಿಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳೊಂದಿಗೆ ವಿಪತ್ತು ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳುವ ಕುರಿತು ಆಯೋಜಿಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದರು.

ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಮಾತನಾಡಿ ಜನವರಿಯಿಂದ ಈವರೆಗೆ 707 ಮಿಲಿ ಮೀಟರ್‍ನಷ್ಟು ಮಳೆಯಾಗಿ ವಾಡಿಕೆ ಗಿಂತ ಶೇ. 58ರಷ್ಟು ಹೆಚ್ಚು ಮಳೆಯಾಗಿದೆ, ಬೇಸಿಗೆಯಲ್ಲೂ ಸಹ ಉತ್ತಮ ಮಳೆಯಾಗಿ ನೀರಿನ ಸಮಸ್ಯೆಯಾಗಿರುವುದಿಲ್ಲ ಎಂದರು

ನೇತ್ರಾವತಿ ನದಿಪಾತ್ರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವಂತಹ 48 ಗ್ರಾಮಪಂಚಾಯಿತಿಗಳನ್ನು ಈಗಾಗಲೇ ಗುರುತಿಸಲಾಗಿದೆ ನೆರೆಯಿಂದ ದುರಂತ ಸಂಭವಿಸುವುದನ್ನು  ತಡೆಯಲು ತಂಡಗಳನ್ನು ರಚಿಸಲಾಗಿದೆ ಎಂದರು.

 380 ಹೋಂಗಾರ್ಡ್ ಗಳನ್ನು ಬೀಚ್‍ಗಳಲ್ಲಿ ಹಾಗೂ ಇತರೆ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣೆ ಕಾರ್ಯಗಳಿಗೆ ಬಳಸಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. .
 ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರ ಮನೆಗಳಿಗೆ ನೀರು ನುಗ್ಗುವ  ಸಂಭವವಿದ್ದಲ್ಲಿ ಅವರನ್ನು ಸ್ಥಳಾಂತರಿಸಲು ಕಾಳಜಿ ಕೇಂದ್ರಗಳನ್ನು ತೆರೆಯಲು ಗುರುತಿಸಲಾಗಿದೆ ಎಂದರು.
 ಜಿಲ್ಲೆಯಲ್ಲಿ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲು 25 ಕೋಟಿ ರೂಗಳಷ್ಟು ವಿಪತ್ತು ನಿಧಿ ಇದೆ ಎಂದ ಅವರು ಮಳೆಯಿಂದ ಹಾನಿಗೊಳಗಾದ 26 ಮನೆಗಳಿಗೆ ಎನ್. ಡಿ.ಆರ್. ಅಫ್ ಮಾರ್ಗಸೂಚಿಯನ್ವಯ ಪರಿಹಾರ ನೀಡಲಾಗಿದೆ ಎಂದರು
ಸಭೆಯಲ್ಲಿ ಶಾಸಕ ಡಾ. ಭರತ್ ವೈ ಶೆಟ್ಟಿ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ  ಪ್ರಜ್ಞಾ ಅಮ್ಮೆಂಬಳ, ಪೋಲಿಸ್ ವರಿಷ್ಠಾಧಿಕಾರಿ  ಹೃಷಿಕೇಶ್ ಸೋನಾವಣೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು