9:09 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ: ಆಮ್ ಆದ್ಮಿ ಪಾರ್ಟಿ ಮೇಲುಗೈ: ಬಿಜೆಪಿ, ಕಾಂಗ್ರೆಸ್ ಗೆ ಹಿನ್ನಡೆ

28/12/2021, 12:51

ಚಂಡೀಗಢ(reporterkarnataka.com):.ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 14 ಸ್ಥಾನಗಳನ್ನು ಗೆಲ್ಲುವ ಮೂಲಕ ಅತೀ ದೊಡ್ಡ ಪಕ್ಷವಾಗಿ ಮೂಡಿ ಬಂದಿದೆ.

ಒಟ್ಟು 35 ಸ್ಥಾನಗಳ ಪೈಕಿ ಉಳಿದಂತೆ ಬಿಜೆಪಿ 12, ಕಾಂಗ್ರೆಸ್ 8 ಮತ್ತು ಶಿರೋಮಣಿ ಅಕಾಲಿದಳ 1 ಸ್ಥಾನ ಗೆದ್ದಿದೆ. ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಪಕ್ಷದ ಹಿರಿಯ ನಾಯಕ ರಾಘವ್ ಚಡ್ಡಾ ಅವರು “ಜನರು ವರ್ಷಗಳಿಂದ ಬದಲಾವಣೆಗಾಗಿ ಹಂಬಲಿಸುತ್ತಿದ್ದಾಗ ಕೇಜ್ರಿವಾಲ್ ಅವರ ಆಡಳಿತದ ಮಾದರಿಯ ವಿಜಯ ಇದಾಗಿದೆ” ಎಂದು ಹೇಳಿದರು. ಮಹಾನಗರ ಪಾಲಿಕೆಯ 35 ವಾರ್ಡ್‌ಗಳಿಗೆ 9 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು.

ಬೆಳಗ್ಗೆ 9 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಡಿಸೆಂಬರ್ 24 ರಂದು ನಡೆದ ಮತದಾನದ ಶೇಕಡಾವಾರು ಈ ವರ್ಷ ಶೇಕಡಾ 60.45 ರಷ್ಟು ಆಗಿತ್ತು. ಸಾಂಪ್ರದಾಯಿಕವಾಗಿ ಪ್ರತಿ ಐದು ವರ್ಷಗಳಿಗೊಮ್ಮೆ ನಡೆಯುವ ಪುರಸಭೆ ಚುನಾವಣೆ – ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿತ್ತು. ಆದರೆ ಈ ಬಾರಿ ಆಮ್ ಆದ್ಮಿ ಪಕ್ಷದ ಪ್ರವೇಶದಿಂದ ತ್ರಿಕೋನ ಸ್ಪರ್ಧೆ ನಡೆದಿತ್ತು .

ಇತ್ತೀಚಿನ ಸುದ್ದಿ

ಜಾಹೀರಾತು