3:23 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಚಂದ್ರನಿಗೆ ಅಪ್ಪಳಿಸಲಿದೆ ಸ್ಪೇಸ್‍ಎಕ್ಸ್ ರಾಕೆಟ್: ಖಗೋಳ ಶಾಸ್ತ್ರಜ್ಞರು ಹೇಳುವುದೇನು?

27/01/2022, 23:10

ವಾಷಿಂಗ್ಟನ್(reporterkarnataka.com): ಏಳು ವರ್ಷಗಳ ಹಿಂದೆ ಉಡಾವಣೆಯಾದ ಸ್ಪೇಸ್‍ಎಕ್ಸ್ ರಾಕೆಟ್ ಮಾರ್ಚ್ ತಿಂಗಳಿನಲ್ಲಿ ಚಂದ್ರನಿಗೆ ಅಪ್ಪಳಿಸಲಿದೆ ಎಂದು ಖಗೋಳ ಶಾಸ್ತ್ರಜ್ಞರು ಎಚ್ಚರಿಸಿದ್ದಾರೆ.

ಫೆಬ್ರವರಿ 2015 ರಲ್ಲಿ ಅಂತರಗ್ರಹ ಕಾರ್ಯಾಚರಣೆಯ ಭಾಗವಾಗಿ ಉಡಾವಣೆಯಾದ ಫಾಲ್ಕನ್ 9 ಬೂಸ್ಟರ್ ರಾಕೆಟ್ ಇಂಧನ ಖಾಲಿಯಾಗಿ ಕಕ್ಷೆಯಲ್ಲಿ ಅಸ್ತವ್ಯಸ್ತವಾಗಿ ಸುತ್ತುತ್ತಿದೆ.

ಈಗ ನಾಲ್ಕು ಟನ್ ತೂಕದ ಸೆಕೆಂಡ್‍ಗೆ 2.58 ಕಿ.ಮೀ ವೇಗದಲ್ಲಿ ಸಂಚರಿಸುವ ರಾಕೆಟ್ ಚಂದ್ರನನ್ನು ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಖಗೋಳ ಶಾಸ್ತ್ರಜ್ಞರು ತಿಳಿಸಿದ್ದಾರೆ.

ಖಗೋಳವಿಜ್ಞಾನಿ ಬಿಲ್ ಗ್ರೇ ಈ ರಾಕೆಟ್ ಪಥವನ್ನು ಟ್ರ್ಯಾಕ್ ಮಾಡುತ್ತಿದ್ದಾರೆ. ರಾಕೆಟ್ ವೀಕ್ಷಿಸುತ್ತಿರುವ ಖಗೋಳಶಾಸ್ತ್ರಜ್ಞರು ಡೇಟಾವನ್ನು ಸಂಗ್ರಹಿಸುತ್ತಿದ್ದು, ಯಾವಾಗ ರಾಕೆಟ್ ಚಂದ್ರನಿಗೆ ಅಪ್ಪಳಿಸಬಹುದೆಂದು ಲೆಕ್ಕಾಚಾರ ಮಾಡುತ್ತಿದ್ದಾರೆ.

ಮಾರ್ಚ್ 4 ರಂದು ಈ ರಾಕೆಟ್ ಅಪ್ಪಳಿಸಬಹುದು ಎಂದು ಅಂದಾಜಿಸಲಾಗಿದ್ದರೂ ಚಂದ್ರನ ಯಾವ ಭಾಗಕ್ಕೆ ಅಪ್ಪಳಿಸಬಹುದು ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಇದು ಬಹಳ ಕಠಿಣ ವಿಚಾರ ಎಂದು ತಜ್ಞರು ತಿಳಿಸಿದ್ದಾರೆ.

ಯಾವುದೇ ಉದ್ದೇಶವಿಲ್ಲದೇ ಬಾಹ್ಯಾಕಾಶದ ಕಸವೊಂದು ಚಂದ್ರನ ಮೇಲೆ ಅಪ್ಪಳಿಸುತ್ತಿರುವುದು ಇದೇ ಮೊದಲು. ಅಪ್ಪಳಿಸಿದ ನಂತರ ಸೃಷ್ಟಿಯಾಗುವ ಕುಳಿಯ ಬಗ್ಗೆ ತಿಳಿಯುವ ವೈಜ್ಞಾನಿಕ ಕುತೂಹಲ ಹೆಚ್ಚಾಗಿದೆ ಎಂದು ಬಿಲ್ ಗ್ರೇ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು