8:37 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಚಂದ್ರಗಿರಿಯ ತೀರದಲ್ಲಿ’ ಖ್ಯಾತಿಯ ಪ್ರಸಿದ್ಧ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ

10/01/2023, 19:42

ಮಂಗಳೂರು(reporterkarnataka.com): ಪ್ರಸಿದ್ಧ ಕಾದಂಬರಿಗಾರ್ತಿ ಸಾರಾ ಅಬೂಬಕ್ಕರ್ (87) ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.

ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಮಂಗಳವಾರ ಅವರು ಕೊನೆಯುಸಿರೆಳೆದರು ಎಂದು ಆಪ್ತ ಮೂಲಗಳು ತಿಳಿಸಿವೆ.
ಚಂದ್ರಗಿರಿ ತೀರದಲ್ಲಿ ಕಾದಂಬರಿ ಮೂಲಕ ಸಾರಾ ಅಬೂಬಕ್ಕರ್ ಅವರು ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರವರ್ಧಮಾನಕ್ಕೆ ಬಂದಿದ್ದರು. ಲಂಕೇಶ್ ಪತ್ರಿಕೆಯಲ್ಲಿ ಅವರ ಚಂದ್ರಗಿರಿಯ ತೀರದಲ್ಲಿ ಕಾದಂಬರಿ ಧಾರಾವಾಹಿ ರೂಪದಲ್ಲಿ ಪ್ರಕಟವಾಗುತ್ತಿತ್ತು.

ಕಾಸರಗೋಡು ಜಿಲ್ಲೆಯ ‘ಪುದಿಯಾಪುರ್’ ತರವಾಡು ಮನೆಯಲ್ಲಿ ಪಿ. ಅಹ್ಮದ್ ಮತ್ತು ಜೈನಾಬಿ ದಂಪತಿ ಮಗಳಾಗಿ ಜನಿಸಿದ್ದ ಸಾರಾ 1984ರಲ್ಲಿ ‘ಚಂದ್ರಗಿರಿಯ ತೀರದಲ್ಲಿ’ ಕಾದಂಬರಿಯ ಬರೆದಿದ್ದರು. ಕನ್ನಡ ಸಾರಸ್ವತ ಲೋಕದಲ್ಲಿ ಈ ಕಾದಂಬರಿ ಸಾಕಷ್ಟು ಸದ್ದು ಮಾಡಿತ್ತು ಹಾಗೆ ಸಾರಾ ಅವರನ್ನು ಪ್ರಖ್ಯಾತಿಯ ಶಿಖರಕ್ಕೆ ಏರಿಸಿತ್ತು.
ಈ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಬಂದಿವೆ. ಕಾದಂಬರಿಯು ದಕ್ಷಿಣ ಭಾರತದ ಹಲವು ಭಾಷೆಗಳು ಮಾತ್ರವಲ್ಲದೆ, ಹಿಂದಿ ಮತ್ತು ಒರಿಯಾ ಭಾಷೆಗೆ ಅನುವಾದಗೊಂಡಿತು.

ಅವರು ಸಹನಾ, ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ತಳಒಡೆದ ದೋಣಿಯಲ್ಲಿ, ಪ್ರವಾಹ-ಸುಳಿ, ಪಂಜರ, ಇಳಿಜಾರು, ಕಾಣಿಕೆ ಮೊದಲಾದ ಕಾದಂಬರಿಗಳನ್ನು ರಚಿಸಿದ್ದಾರೆ. ಐದು ಕಥಾಸಂಕಲನ, ನಾಟಕ, ಪ್ರವಾಸ ಕೃತಿಗಳು, ಪ್ರಬಂಧ ಸಂಕಲನಗಳನ್ನು ಹೊರತಂದಿದ್ದಾರೆ. ಕಮಲಾದಾಸ್ (ಮನೋಮಿ), ಬಿ.ಎಂ. ಸುಹರಾ(ಬಲೆ) ಪಿ.ಕೆ. ಬಾಲಕೃಷ್ಣನ್ (ನಾನಿನ್ನು ನಿದ್ರಿಸುವೆ), ಈಚರ ವಾರಿಯರ್(ತುರ್ತು ಪರಿಸ್ಥಿತಿಯ ಕರಾಳ ಮುಖ) , ಆರ್. ಬಿ. ಶ್ರೀಕುಮಾರ್ (ಧರ್ಮದ ಹೆಸರಿನಲ್ಲಿ), ಡಾ. ಕತೀಜಾ ಮುಮ್ತಾಜ್ (ಮುಂಬೆಳಕು), ಎಂ.ಎನ್. ಕಾರಶೇಂ(ವೈಕಂ ಮಹಮ್ಮದ್ ಬಷೀರ್), ಸಯ್ಯದ್ ಮೆಹಬೂಬ್ ಶಾ ಖಾದ್ರಿ (ಮುಸ್ಲಿಂ ಮಹಿಳೆಯರು ಮತ್ತು ತಲಾಖ್) ಎಂಬ ಕೃತಿಗಳನ್ನು ಮಲಯಾಳ ಭಾಷೆಯಿಂದ ಕನ್ನಡಕ್ಕೆ ಅನುವಾದಿಸಿದ್ದರು.
ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಗೌರವ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಬಂದಿವೆ. ಮಂಗಳೂರು ವಿಶ್ವವಿದ್ಯಾಲಯವು ಅವರಿಗೆ 2008ರಲ್ಲಿ ಗೌರವ ಡಾಕ್ಟರೇಟ್‌ ನೀಡಿತ್ತು.
ಸಾರಾ ಅವರು ನಾಲ್ವರು ಪುತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು