1:27 AM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಚರಂಡಿ ಕಾಮಗಾರಿ: ಬಿ ಹೊಸಹಳ್ಳಿ ಗ್ರಾಪಂ ಸದಸ್ಯರಿಂದ ಆರೋಪ ಪ್ರತ್ಯಾರೋಪ

17/10/2022, 23:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka.com

ಕೊಟ್ಟಿಗೆಹಾರ ಸಮೀಪದ ಬಿ ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಚರಂಡಿ ಕಾಮಗಾರಿಯ ಬಗ್ಗೆ ಗ್ರಾ.ಪಂ ಸದಸ್ಯರಿಬ್ಬರು ಪ್ರತ್ಯೇಕವಾಗಿ ಪತ್ರಿಕಾ ಹೇಳಿಕೆ ನೀಡಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ.

ಬಿ ಹೊಸಹಳ್ಳಿ ಗ್ರಾಪಂ ಸದಸ್ಯರಾದ ಶಿವಪ್ರಸಾದ್ ಬಿ.ಇ. ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಬಿ.ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಚರಂಡಿ ಕಾಮಗಾರಿ ಕಳಪೆಗುಣಮಟ್ಟದ್ದಾಗಿದ್ದು, ನಿರ್ಮಾಣಗೊಂಡ ಕೆಲವೇ ದಿನದಲ್ಲಿ ಕುಸಿದುಬಿದ್ದಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಂಬಂಧಿಸಿದ ಅಭಿವೃದ್ಧಿ ಅಧಿಕಾರಿಗಳಿಗೆ ಕೇಳಿಕೊಂಡರು ಯಾವುದೇ ಪ್ರಯೋಜನವಾಗುತ್ತಿಲ್ಲ.

ಚರಂಡಿ ಮಾತ್ರವಲ್ಲದೇ ಸ್ಮಶಾನ ಸುತ್ತ ಟ್ರಂಚಿಂಗ್ ಕಾಮಗಾರಿಯಲ್ಲಿ ಅವೈಜ್ಞಾನಿಕವಾಗಿ ಟ್ರಂಚ್‌ನ ಅಗಲ ಜಾಸ್ತಿ ಮಾಡಿ, ಸಮರ್ಪಕ ನೀರಿನ ಓಟ ನೀಡದಿರುವುದು ಕೂಡ ಮೇಲುನೋಟಕ್ಕೆ ಕಳಪೆ ಕಾಮಗಾರಿಯಂತಾಗಿದೆ ಎಂದು ಆರೋಪಿಸಿದ್ದಾರೆ.

ಪ್ರತಿ ವರ್ಷ ಪಂಚಾಯಿತಿ ಮಟ್ಟದ ಲೆಕ್ಕಪತ್ರಕ್ಕೆ ಸಂಬಂಧಪಟ್ಟಂತೆ ಆಡಿಟ್ ನಡೆಯುತ್ತಿದ್ದರು ಕೂಡ ಗುತ್ತಿಗೆದಾರರು ಯಾವುದೇ ಅಂಜಿಕೆ ಇಲ್ಲದೆ ಇಂತಹ ಕಳಪೆ ಕಾಮಗಾರಿಗಳನ್ನು ನಡೆಸುತ್ತಿರುವುದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಮತ್ತು ಅಧ್ಯಕ್ಷಾರಾದಿಯಾಗಿ ಚುನಾಯಿತ ಪ್ರತಿನಿಧಿಗಳ ಬಗ್ಗೆ ಜನಸಾಮಾನ್ಯರಲ್ಲಿ ಸಂಶಯ ಮೂಡುವಂತಿದೆ.

ಆಡಳಿತ ವ್ಯವಸ್ಥೆಯ ಬಗ್ಗೆಯೇ ಭರವಸೆ ಕಳೆದುಕೊಳ್ಳುತ್ತಿದ್ದಾರೆ. ಈ ವಿಷಯವನ್ನು ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಗುಣಮಟ್ಟದ ಬಗ್ಗೆ ಮತ್ತು ಕಳಪೆ ಕಾಮಗಾರಿಯ ಬಾಗವಾಗಿರುವ ತಪ್ಪಿತಸ್ಥರ ವಿರುದ್ದ ಕೂಡಲೇ ಕ್ರಮವಹಿಸಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು