2:08 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಯುಪಿಐ ವಹಿವಾಟಿನ ಮೇಲೆ ಶುಲ್ಕದಿಂದ ಡಿಜಿಟಲ್ ಭಾರತದ ಆಶಯಕ್ಕೆ ಹಿನ್ನಡೆ: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

16/09/2026, 14:07

ಮಂಗಳೂರು(reporterkarnataka.com): ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಹೊರಟಿರುವ ಸರ್ಕಾರದ ನಿಲುವು ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ಬಗೆದ ಬಹುದೊಡ್ಡ ದ್ರೋಹ ಹಾಗೂ ಹಿಮ್ಮುಖ ಚಲನೆಯ ಸಂಕೇತ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಟೀಕಿಸಿದ್ದಾರೆ.
ಆರಂಭದಲ್ಲಿ ‘ಉಚಿತ ಮತ್ತು ಸರಳ’ ವ್ಯವಸ್ಥೆಯ ಆಮಿಷವೊಡ್ಡಿ ಇಡೀ ದೇಶವನ್ನು ಡಿಜಿಟಲ್ ವಹಿವಾಟಿಗೆ ಒಗ್ಗಿಸಿದ ನಂತರ, ಈಗ ಜನಸಾಮಾನ್ಯರ ಅಭ್ಯಾಸವನ್ನೇ ಬಂಡವಾಳವಾಗಿಸಿಕೊಂಡು ಶುಲ್ಕ ಹೇರಲು ಹೊರಟಿರುವುದು ಸರ್ಕಾರದ ಅಸಂಬದ್ಧ ನೀತಿಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.
ಈ ಶುಲ್ಕವನ್ನು ವ್ಯಾಪಾರಿಗಳ ಮೇಲೆ (MDR) ವಿಧಿಸಲಾಗುತ್ತದೆ, ಗ್ರಾಹಕರಿಗಲ್ಲ ಎಂಬ ವಾದ ಕೇವಲ ಕಣ್ಣೊರೆಸುವ ತಂತ್ರವಷ್ಟೇ; ಕ್ರೆಡಿಟ್ ಕಾರ್ಡ್‌ನಂತೆಯೇ ವ್ಯಾಪಾರಿಗಳು ಈ ಹೊರೆಯನ್ನು ದಿನಸಿ, ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ಮೂಲಕ ಅಂತಿಮವಾಗಿ ಸಾಮಾನ್ಯ ಜನರ ಜೇಬಿಗೇ ವರ್ಗಾಯಿಸಲಿದ್ದಾರೆ. ಅಲ್ಲದೆ, ₹1 ಲಕ್ಷದ ವರೆಗಿನ ವಿನಾಯಿತಿಯ ಸಂಕೀರ್ಣ ಜಿಎಸ್‌ಟಿ ಲೆಕ್ಕಾಚಾರಗಳು ಸಣ್ಣ ವ್ಯಾಪಾರಿಗಳಲ್ಲಿ ಅನಿಶ್ಚಿತತೆ ಮೂಡಿಸಿ, ಕ್ಯೂಆರ್ ಕೋಡ್ ಮರೆಮಾಚಿ ಮತ್ತೆ “ನಗದನ್ನೇ ನೀಡಿ” ಎಂದು ಒತ್ತಾಯಿಸುವಂತೆ ಮಾಡುತ್ತದೆ. ಪರಿಣಾಮವಾಗಿ, ₹2,000 ಮೇಲ್ಪಟ್ಟ ವಹಿವಾಟುಗಳಿಗೆ ಶುಲ್ಕ ಮತ್ತು ತೆರಿಗೆ ಉಳಿಸಲು ಜನರು ಮತ್ತೆ ನಗದಿನ ಮೊರೆಹೋಗಲಿದ್ದು, ಇದು ಪಾರದರ್ಶಕ ಆರ್ಥಿಕತೆಗೆ ಅಡ್ಡಿಯಾಗಿ ಕಪ್ಪುಹಣದ ಚಲಾವಣೆಯನ್ನು ಮತ್ತೆ ಹೆಚ್ಚಿಸಲಿದೆ. ಆರ್ಥಿಕತೆಯನ್ನು ನಗದು ರಹಿತವಾಗಿಸುವ ಪ್ರಕ್ರಿಯೆಯನ್ನು ಉತ್ತೇಜಿಸುವ ಬದಲು, ಅದನ್ನೇ ಹೊರೆಯಾಗಿಸಿ ಬ್ಯಾಂಕಿಂಗ್ ಲಾಬಿಗೆ ಮಣಿದಿರುವ ಸರ್ಕಾರದ ಈ ನಡೆ ಖಂಡನೀಯ ಎಂದು ಪದ್ಮರಾಜ್ ಆರ್. ಪೂಜಾರಿ
ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು