12:58 AM Saturday10 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್‌ ರಸ್ತೆಗೆ 343.74 ಕೋಟಿ ಬಿಡುಗಡೆ: ಅಭಿವೃದ್ಧಿ ಹೆಸರಿನಲ್ಲಿ 10 ವರ್ಷ ರಸ್ತೆ ಮುಚ್ಚುವ ಹುನ್ನಾರ?; ಚರ್ಚೆ ಆರಂಭ

15/11/2024, 22:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಒಕ್ಕೂಟ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವ ಹೇಳಿಕೆ ಬೆನ್ನಲ್ಲೇ ಗಂಭೀರ ಚರ್ಚೆಗಳು ಆರಂಭವಾಗಿವೆ.

ಹಣ ಬಿಡುಗಡೆ ಬಗ್ಗೆ ಮಾಹಿತಿ ನೀಡಿರುವ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಂಗಳೂರಿನಿಂದ ಮೂಡಿಗೆರೆ – ತುಮಕೂರಿಗೆ ಸಂಪರ್ಕಿಸುವ ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ.ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ ಎಂದಿದ್ದಾರೆ.
ರಾಜ್ಯದ ಪ್ರಮುಖ ಹೆದ್ದಾರಿ ಚಾರ್ಮಾಡಿ ಘಾಟ್‌ನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲದ ಜೊತೆಗೆ ಸುಗಮ ಸರಕು ಸಾಗಣೆಯೊಂದಿಗೆ ಈ ಭಾಗದ ವ್ಯಾಪಾರ-ವಹಿವಾಟು ಕೂಡ ವೃದ್ಧಿಸಲಿದೆ ಎನ್ನುವುದು ಸಂಸದರ ಅಭಿಪ್ರಾಯ.
ಮತ್ತೊಂದು ದುರಂತ ? :ಚಾರ್ಮಾಡಿ ರಸ್ತೆಗೆ ಅಭಿವೃದ್ಧಿಗೆ ಹಣ ಬಿಡುಗಡೆ ಆಗಿರುವುದು ಸಂತೋಷ, ಆದರೆ ಸರಿಯಾದ ಕ್ರಿಯಾ ಯೋಜನೆ ಇಲ್ಲದೆ ರಸ್ತೆ ಮಾಡಲು ಹೊರಟಿರೋದು ಮತ್ತೊಂದು ಶಿರಾಡಿ ಘಾಟ್ ದುರಂತ ಆಗುವುದಿಲ್ಲವೇ ಎನ್ನುವ ಪ್ರಶ್ನೆ ಎದುರಾಗಿದೆ.
ಡಬಲ್ ರೋಡ್ ಮಾಡಲು ಜಾಗಾನೇ ಇಲ್ಲ ,ಸ್ವಲ್ಪ ಜಾಸ್ತಿ ಹಣ ಆದರೂ ಪರವಾಗಿಲ್ಲ ಉತ್ತಮವಾದ ಸುರಂಗ ಮಾರ್ಗನೋ ಅಥವಾ ಫ್ಲೈ ಓವರ್ ರೀತಿಯ ಕ್ರಿಯಾ ಯೋಜನೆ ಮಾಡಿ, ಆಗು ಹೋಗುಗಳ ಬಗ್ಗೆ ಚರ್ಚಿಸಿ ಮತ್ತಷ್ಟು ಹಣ ಸೇರಿಸಿ ಉತ್ತಮವಾದ ರಸ್ತೆ ನಿರ್ಮಿಸಿ ಎನ್ನುವ ಸಲಹೆ ಚಾರ್ಮಾಡಿ ರಸ್ತೆ ಉಳಿಸಿ ಹೋರಾಟ ಸಮಿತಿ ಸಂಚಾಲಕ ಸಂಜಯ್ ಕೊಟ್ಟಿಗೆಹಾರ ರವರದು.
ಅಭಿವೃದ್ಧಿಯ ಹೆಸರಲ್ಲಿ ಸುಮಾರು 10 ವರ್ಷಗಳ ಕಾಲ ರಸ್ತೆ ಮುಚ್ಚುವ ಹುನ್ನಾರ ನಡೆದಿದೆ, 3 ವಿಭಾಗದ ಟೆಂಡರ್ ಆಗಿದ್ದು ಒಂದು ವಿಭಾಗದ ರಸ್ತೆ ಮಾಡಲು 5 ವರ್ಷ ಬೇಕು, ಹೀಗಾದರೆ ಕೊಟ್ಟಿಗೆಹಾರ ಹತ್ತು ವರ್ಷಗಳಲ್ಲಿ ನಿರ್ನಾಮವಾಗಲಿದೆ ಎನ್ನುವ ಆತಂಕ ಹೊರ ಹಾಕಿ ನಮಗೇನು ಡಬಲ್ ರಸ್ತೆ ಬೇಕಾಗಿಲ್ಲ,ಗುಂಡಿ ಮುಚ್ಚಿದರೆ ಸಾಕು ಎಂದಿದ್ದಾರೆ.
ಡಬಲ್ ರಸ್ತೆ ಹೆಸರಿನಲ್ಲಿ ವಿದ್ಯಾರ್ಥಿಗಳ ಹಾಗೂ ನಾವು ನಂಬಿರುವ ದಕ್ಷಿಣ ಕನ್ನಡ ಆಸ್ಪತ್ರೆಗೆ ಹೋಗಲು ಬಹಳ ತೊಂದರೆ ಆಗಲಿದೆ , ಎಲ್ಲರೂ ಕೈ ಜೋಡಿಸಿದರೆ ಒಂದು ದೊಡ್ಡ ಮಟ್ಟದ ಹೋರಾಟ ಮಾಡೋಣ ಎಂದು ಕೆಲವರು ಪ್ರತಿಕ್ರಿಯಿಸಿದ್ದು ಹೋರಾಟದ ರೂಪುರೇಷೆ ನಿರ್ಧರಿಸಲು ಸಭೆಯನ್ನು ಕರೆಯಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು