6:21 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಲಾರಿ: ತಾಸುಗಟ್ಟಲೆ ವಾಹನ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ

20/07/2022, 10:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ನಡುವಿನ ಚಾರ್ಮಾಡಿ ಘಾಟಿಯಲ್ಲಿ ಲಾರಿಯೊಂದು‌ ಕೆಟ್ಟು ನಿಂತ ಪರಿಣಾಮ ತಾಸುಗಟ್ಟಲೆ ವಾಹನ ಸಂಚಾರಕ್ಕೆ ತಡೆಯುಂಟಾಗಿದ್ದು, ಪ್ರಯಾಣಿಕರು ಪರದಾಡುವಂತಾಯಿತು.

ಘಾಟಿಯ 10ನೇ ತಿರುವಿನಲ್ಲಿ ಮಂಗಳವಾರ ರಾತ್ರಿ ಸುಮಾರು 8.30ರ ಸುಮಾರಿಗೆ  ಇಂಧನ ತುಂಬಿದ ಟ್ಯಾಂಕರ್ ತಾಂತ್ರಿಕ ದೋಷದಿಂದ ಮಾರ್ಗ ಮದ್ಯೆ ಕೆಟ್ಟು ನಿಂತಿತ್ತು. ಇದರ ಪರಿಣಾಮ ಇತರ ವಾಹನಗಳ ಸುಗಮ ಸಂಚಾರಕ್ಕೆ ತಡೆಯುಂಟಾಯಿತು. ಬೆಂಗಳೂರು ಸೇರಿಂತೆ ಇನ್ನಿತರ ಕಡೆಗಳಿಗೆ ಹೋಗುವ ಬಸ್ಸು ಹಾಗೂ ಇತರ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು. ಈ ಬಗ್ಗೆ ಮಾಹಿತಿ ಪಡೆದ ಹೊಯ್ಸಳದ ಪೊಲೀಸರು ಕೊಟ್ಟಿಗೆಹಾರದ ಚಾರ್ಮಾಡಿ ಗೇಟ್ ಬಳಿ‌ ನಿಯಂತ್ರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನಂತರ  ಕ್ರೇನ್ ತರಿಸಿ ಟ್ಯಾಂಕರ್ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. 


ಈಗಾಗಲೇ ಶಿರಾಡಿ, ಸಂಪಾಜೆಯಲ್ಲಿ ಮಾರ್ಗ ಕುಸಿತದಿಂದ ವಾಹನ ಸಂಚಾರಕ್ಕೆ ತಡೆಯಾಗಿರುವುದರಿಂದ ಹೆಚ್ಚಿನ ವಾಹನ ಸಂಚಾರ ಈ ರಸ್ತೆಯಲ್ಲಿ‌ ಇದೆ. ವಾಹನ ದಟ್ಟನೆ‌ ಹಾಗೂ ಅತೀ ಹೆಚ್ಚು ಬಸ್ಸುಗಳು ಸಂಚಾರಿಸುವುದರಿಂದ‌ ನಿಯಂತ್ರಿಸಲು‌ ಪೊಲೀಸರು ಹರ ಸಾಹಸ ಪಡುವಂತಾಯಿತು. ಸ್ಥಳದಲ್ಲಿ ಹೊಯ್ಸಳದ ಪಿಎಸ್ ವೆಂಕಪ್ಪ ಮತ್ತು ಬಸವರಾಜ್, ಸಂಚಾರಿ ಠಾಣೆಯ ಪಿಎಸ್ ಐ ಓಡಿಯಪ್ಪ, ಹಾಗೂ ಶಿವರಾಮ ರೈ,,ಕುಮಾರ್  ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು