ಇತ್ತೀಚಿನ ಸುದ್ದಿ
ಚಾರ್ಮಾಡಿ ಘಾಟಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಬ್ರೇಕ್ ಫೇಲ್: ಸಮಯ ಪ್ರಜ್ಞೆಯಿಂದ 70ಕ್ಕೂ ಅಧಿಕ ಪ್ರಯಾಣಿಕರ ಜೀವ ಉಳಿಸಿದ ಚಾಲಕ
08/03/2024, 11:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕೊಟ್ಟಿಗೆಹಾರ ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆಎಸ್ಸಾರ್ಟಿಸಿ ಬಸ್ಸೊಂದು ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.
ಬಸ್ಸಿನ ಬ್ರೇಕ್ ಕಂಟ್ರೋಲ್ ತಪ್ಪುತ್ತಿದ್ದಂತೆ ಡಿವೈಡರ್ ಗೆ ಡಿಕ್ಕಿ
ಡಿಕ್ಕಿ ಹೊಡೆಸಿ ಚಾಲಕ ಸಂತೋಷ್ ಅವರು ಬಸ್ ನಿಲ್ಲಿಸಿದ್ದಾರೆ. ಡಿಕ್ಕಿ ಹೊಡೆಯುತ್ತಿದ್ದಂತೆ ಭಾರಿ ಪ್ರಮಾಣದ ಹೊಗೆ ಹೊರಬಂತು. ಬಸ್ ಕಡೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು. ಇಳಿಜಾರಿನಲ್ಲಿ ಬ್ರೇಕ್‌ಫೇಲ್ ಆದ ಹಿನ್ನೆಲೆ ಹರಸಾಹಸ ಪಟ್ಟ ಚಾಲಕ ಬಸ್ಸನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ 70ಕ್ಕೂ ಅಧಿಕ ಪ್ರಯಾಣಿಕರ ಜೀವ ಉಳಿದಿದೆ.