4:58 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಂಜು: 2 ಪ್ರತ್ಯೇಕ ಅಪಘಾತ; ಹಲವರಿಗೆ ಗಾಯ

09/09/2023, 10:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಳೆ ಜೊತೆ ದಟ್ಟ ಮಂಜು ಕವಿದಿದ್ದು ವಾಹನ ಸವಾರರು ಪಾರ್ಕಿಂಗ್ ಲೈಟ್, ಹೆಡ್‍ಲೈಟ್, ಫಾಗ್ ಲೈಟ್ ಹಾಕಿಕೊಂದು ಹೋದರು ವಾಹನ ಸಂಚಾರ ದುಸ್ತರವಾಗುವಂತಹಾ ಸ್ಥಿತಿ ನಿರ್ಮಾಣವಾಗಿದೆ. 22 ಕಿ.ಮೀ. ವ್ಯಾಪ್ತಿಯ ಕೊಟ್ಟಿಗೆಹಾರ-ಚಾರ್ಮಾಡಿ ಮಾರ್ಗದಲ್ಲಿ ಭಾರೀ ಮಂಜು ಕವಿದಿದ್ದು ಆ ಮಂಜಿನಲ್ಲಿ ವಾಹನ ಸಂಚಾರಿಸಲಾಗದೆ ಸಂಜೆ ಎರಡು ಅಪಘಾತಗಳು ಕೂಡ ಸಂಭವಿಸಿವೆ.


ಬಿದಿರುತಳ ಗ್ರಾಮದ ಬಸ್ ನಿಲ್ದಾಣದ ಬಳಿ ಮಂಗಳೂರಿಗೆ ಹೋಗುತ್ತಿದ್ದ ಬೊಲೆರೋ ವಾಹನವೊಂದು ದಟ್ಟ ಮಂಜಿನಲ್ಲಿ ಸರಿಯಾಗಿ ದಾರಿ ಕಾಣದೆ ರಸ್ತೆಯ ಒಂದು ಬದಿಯ ಪ್ರಪಾತಕ್ಕೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆಗೆ ಡಿಕ್ಕಿಯೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮತ್ತೊಂದು ಅಪಘಾತ ಅಣ್ಣಪ್ಪಸ್ವಾಮಿ ದೇಗುಲದ ಸಮೀಪದ ಕಿರಿದಾದ ರಸ್ತೆಯಲ್ಲಿ ದಟ್ಟ ಮಂಜು ಕವಿದಿದ್ದ ಕಾರಣ ದಾರಿ ಕಾಣದೆ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಸರ್ಕಾರಿ ಬಸ್ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಮುಗಿಸಿ ಧಾರವಾಡಕ್ಕೆ ಹೊರಟಿದ್ದ ಬೊಲೆರೋ ಕಾರು ಅತಿಯಾದ ತಿರುವಿನ ಕಿರಿ ರಸ್ತೆಯಲ್ಲಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯೊಡೆದಿದ್ದು ತಡೆಗೋಡೆಯೇ ಕುಸಿದು ಬಿದ್ದಿದೆ. ಕಾರು ಹಾಗೂ ಬಸ್ಸಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಈ ಸಣ್ಣ ಕಿರು ರಸ್ತೆಯಲ್ಲಿ ಸಾವಿರಾರು ಅಡಿ ಪ್ರಪಾತವಿದ್ದು, ಸ್ವಲ್ಪ ಹೆಚ್ಚು-ಕಡಿಮೆಯಾಗಿದ್ದರೂ ಬಸ್ ಹಾಗೂ ಕಾರು ಎರಡು ಪ್ರಪಾತಕ್ಕೆ ಬೀಳುತ್ತಿತ್ತು. ಆದರೆ, ಬಹುದೊಡ್ಡ ಅನಾಹುತವೊಂದು ಜಸ್ಟ್ ಮಿಸ್ ಆದಂತಾಗಿದೆ. ಚಾರ್ಮಾಡಿ ಘಾಟಿಯ ಈ ರಸ್ತೆಯಲ್ಲಿ ಈ ಕಿರು ರಸ್ತೆ ಅಂದಿನಿಂದಲೂ ಇದೆ. ಹೆದ್ದಾರಿ ಪ್ರಾಧಿಕಾರ ಈ ಚಿಕ್ಕ ರಸ್ತೆಯನ್ನ ಅಗಲ ಮಾಡಬೇಕೆಂದು ಸ್ಥಳಿಯರು ಮನವಿ ಮಾಡಿದ್ದರು. ಆದರೆ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಡೆಕೇಡಿಸಿಕೊಳ್ಳದ ಕಾರಣ ಇಂದು ಈ ಅನಾಹುತ ಸಂಭವಿಸಿದೆ ಎಂದು ಸ್ಥಳಿಯರು ಪ್ರಾಧಿಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇನ್ನೂ ಈಗ ಘಾಟಿಯಲ್ಲಿ ಭಾರೀ ಮಂಜು ಕವಿದಿದೆ. ತಡೆಗೋಡೆ ಬೇರೆ ಕುಸಿದಿದೆ. ರಸ್ತೆಯೂ ಕಿರಿದಾದ ರಸ್ತೆ. ಮತ್ತೊಂದು ಅನಾಹುತ ಸಂಭವಿಸೋ ಮೊದಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೂ ರಸ್ತೆಗೊಂದು ಬಂದೋಬಸ್ತ್ ಕಲ್ಪಿಸಿ ಶೀಘ್ರದಲ್ಲೇ ತಡೆಗೋಡೆ ನಿರ್ಮಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು