5:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು: ಪ್ರಪಾತಕ್ಕೆ ಉರುಳಿದ ಲಾರಿ; ಡ್ರೈವರ್- ಕ್ಲಿನರ್ ಪಾರು

16/09/2023, 10:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಮಂಜು ಮುಸುಕಿದ ಪರಿಣಾಮ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಘಟನೆ ನಡೆದಿದೆ.


ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ ಸುತ್ತಮುತ್ತ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ನದಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಚಾರ್ಮಾಡಿ ಘಾಟ್ ನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಶುಕ್ರವಾರ ರಾತ್ರಿ ನೀರಿನ ಬಾಟಲ್ ತುಂಬಿದ ಲಾರಿ ಒಂದು ಮಂಜಿನಿಂದ ದಾರಿ ಕಾಣದೆ 100 ಅಡಿ ಪ್ರಪಾತಕ್ಕೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಪ್ರಾಣ ಉಳಿಸಿದ ಮರ: ಲಾರಿ ಬಿದ್ದ ಜಾಗದಲ್ಲಿ ಬೃಹತಾಕಾರದ ಮರವಿದ್ದು ಆ ಮರಕ್ಕೆ ಲಾರಿ ತಗಲಿ ನಿಂತಿದೆ. ಆ ಮರ ಇಲ್ಲದಿದ್ದರೆ ಸಾವಿರ ಅಡಿ ಪ್ರಪಾತಕ್ಕೆ ಲಾರಿ ಹೋಗಿ ಬೀಳುತ್ತಿತ್ತು.ಈ ಘಟನೆ ಚಾರ್ಮಾಡಿ ಘಾಟಿಯ ಸೋಮನ ಕಾಡು ಸಮೀಪ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು