9:56 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ 2,000 ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ: ಪ್ರಾಣಪಾಯದಿಂದ ಚಾಲಕ ಪಾರು

13/01/2024, 12:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಚಾರ್ಮಾಡಿ ಘಾಟಿಯ ಸೋಮನ ಕಾಡು ಸಮೀಪ ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ.

ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದ್ದು ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿಗಳು, ಸಮಾಜ ಸೇವಕ ಆರೀಫ್ ಹಾಗೂ ಅಬ್ದುಲ್ ರೆಹಮಾನ್ ಧಾವಿಸಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು