11:42 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್: ಅರಣ್ಯ ಇಲಾಖೆಯ 2 ತಂಡಗಳಿಂದ ರಸ್ತೆ ಬದಿ 11 ಕಿಮೀ ಸ್ವಚ್ಛತಾ ಕಾರ್ಯ

01/10/2023, 21:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಅರಣ್ಯ ಇಲಾಖೆಯ ವತಿಯಿಂದ ಚಾರ್ಮಾಡಿ ಘಾಟ್ ಮಲಯ ಮಾರುತದಿಂದ ಗಡಿ ಭಾಗದವರೆಗೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯ ನಡೆಸಲಾಯಿತು.


ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಚರಣ್ ಕುಮಾರ್ ಮಾತನಾಡಿ ‘ಪ್ರತಿ ವರ್ಷ ಅಕ್ಟೋಬರ್ 1 ರಿಂದ 7ರವರೆಗೆ ವನ್ಯ ಜೀವಿ ಸಪ್ತಾಹವನ್ನು ಇಲಾಖೆ ವತಿಯಿಂದ ಆಚರಿಸುತ್ತೇವೆ. ಈ ವರ್ಷವೂ ನಮ್ಮ ಎಲ್ಲ ಸಿಬ್ಬಂದಿಗಳ ಜೊತೆಗೆ ಚಾರ್ಮಾಡಿ ರಸ್ತೆ ಭಾಗದಲ್ಲಿ ಬಿದ್ದ ಪ್ಲಾಸ್ಟಿಕ್ ಮತ್ತಿತರ ಕಸಗಳನ್ನು ಹೆಕ್ಕಿ ಸ್ವಚ್ಚತಾ ಆಂದೋಲನ ಮಾಡುತ್ತಿದ್ದೇವೆ. ಸುಮಾರು 11 ಕಿ.ಮೀ ವರೆಗೆ ಎರಡು ತಂಡವಾಗಿ ಸಿಬ್ಬಂದಿಗಳು ಸ್ವಚ್ಚತೆ ಮಾಡುತ್ತಿದ್ದು ಕಸವನ್ನು ಗೋಣಿ ಚೀಲದಲ್ಲಿ ಹಾಕಿ ವಾಹನದ ಮೂಲಕ ಕಸವನ್ನು ವಿಲೇವಾರಿ ಮಾಡುತ್ತಿದ್ದೇವೆ. ಗಾಂಧೀಜಿಯವರ ಸ್ವಚ್ಚ ಭಾರತ ಕನಸು ನನಸು ಮಾಡುವುದು ಇಲಾಖೆಯ ಉದ್ದೇಶವಾಗಿದೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು