2:34 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ: 3 ದಿನದಿಂದ ಹೊತ್ತಿ ಉರಿಯುತ್ತಿರುವ ಅರಣ್ಯ; ಬದುಕುಳಿಯಲು ನಾಡಿಗೆ ಬಂದ ಕಾಳಿಂಗ!!

07/03/2023, 22:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದ ವ್ಯಾಪ್ತಿಗೆ ಸೇರುವ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶ ಕಳೆದ ಮೂರು ದಿನಗಳಿಂದ ನಿರಂತರವಾಗಿ ಹೊತ್ತಿ ಉರಿಯುತ್ತಿದೆ. ಚಾರ್ಮಾಡಿಯ ದಟ್ಟಕಾನನದಲ್ಲಿದ್ದ ಆಶ್ರಯ ಪಡೆದುಕೊಂಡಿದ್ದ ನೂರಾರು ಪ್ರಾಣಿಪಕ್ಷಿಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿವೆ. ಆದರೆ, ಕೆಲ ಪ್ರಾಣಿಗಳು ಜೀವ ಉಳಿಸಿಕೊಳ್ಳಲು ನಾಡಿನತ್ತ ಮುಖ ಮಾಡಿವೆ.


ಮರದ ಪೊಟರೆ, ಭೂಮಿಯ ಒಳಗೆ ಹೆಚ್ಚಾಗಿ ವಾಸ ಮಾಡುವ ಕಾಳಿಂಗ ಸರ್ಪಗಳು ಮರದಲ್ಲೂ ಇರಲಾಗದೆ, ಬೆಂಕಿ ಬಿದ್ದ ಭೂಮಿಯ ತಾಪದಿಂದ ಭೂಮಿಯ ಒಳಗೂ ಇರಲಾರದೆ ನಾಡಿನತ್ತ ಮುಖ ಮಾಡಿವೆ. ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ತುರುವೆ ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಆಶ್ರಯ ಪಡೆದುಕೊಳ್ಳಲು ಜಾಗ ಹುಡುಕುತ್ತಿರುವಾಗ ಸ್ಥಳಿಯರ ಕಣ್ಣಿಗೆ ಬಿದ್ದು ಸೆರೆಯಾಗಿದೆ. ತುರುವೆ ಗ್ರಾಮದ ಸಮುದಾಯ ಭವನದ ಬಳಿ ಬಂದ ಸುಮಾರು 15 ಅಡಿ ಉದ್ದದ ಕಾಳಿಂಗ ಸರ್ಪ ಬೆಚ್ಚನೆಯ ಜಾಗ ಹುಡುಕುತ್ತಿದ್ದ ವೇಳೆ ಸ್ಥಳಿಯರ ಕಣ್ಣಿಗೆ ಬಿದ್ದಿದೆ. ದೈತ್ಯಾಕಾರದ ಕಾಳಿಂಗ ಸರ್ಪವನ್ನ ಕಂಡ ಸ್ಥಳಿಯರು ಆತಂಕದಿಂದ ಕೂಗಿದ್ದಾರೆ. ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಸುಮಾರು ಅರ್ಧ ಗಂಟೆಗಳ ಕಾರ್ಯಾಚರಣೆ ನಡೆಸಿ ದೈತ್ಯ ಕಾಳಿಂಗನನ್ನ ಸೆರಿ ಹಿಡಿದಿದ್ದಾರೆ. ಸೆರೆ ಹಿಡಿದು ಬಳಿಕ ತೀವ್ರ ನಿತ್ರಾಣಗೊಂಡಿದ್ದ ಕಾಳಿಂಗ ಸರ್ಪಕ್ಕೆ ಹಾವಾಡಿಗ ನೀರು ಕುಡಿಸಿದ್ದಾನೆ. ಈ ಕಾಳಿಂಗ ಸರ್ಪ ಎಷ್ಟು ದೈತ್ಯಾಕಾರವಿದೆ ಅಂದ್ರೆ, ಸೆರೆ ಹಿಡಿದ ಸ್ನೇಕ್ ಆರೀಫ್ ಅದನ್ನ ಎತ್ತಿಕೊಳ್ಳಲು ಕಷ್ಟಪಡಬೇಕಾದಷ್ಟು ಭಾರವಾಗಿತ್ತು ಈ ಕಾಳಿಂಗ ಸರ್ಪ. ಕೊನೆಗೆ ಸೆರೆ ಹಿಡಿದ ಕಾಳಿಂಗ ಸರ್ಪವನ್ನ ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಚಾರ್ಮಾಡಿ ಘಾಟಿಯಲ್ಲೇ ಬೆಂಕಿ ಬೀಳದ ಪ್ರದೇಶಕ್ಕೆ ಬಿಟ್ಟಿದ್ದಾರೆ. ಆದರೆ, ಚಾರ್ಮಾಡಿ ಘಾಟಿಯ ಸುತ್ತಮುತ್ತಲಿನ ಜನ ಭಯದಲ್ಲಿ ಬದುಕುವಂತಾಗಿದೆ. ಅರಣ್ಯಕ್ಕೆ ಬಿದ್ದಿರೋ ಬೆಂಕಿ ನಿಲ್ಲುವಂತೆ ಕಾಣುತ್ತಿಲ್ಲ. ಮೂರು ದಿನಗಳಿಂದ ಒಂದೇ ಸಮನೆ ಹೊತ್ತಿ ಧಗಧಗಿಸುತ್ತಿದೆ. ಈ ವೇಳೆ ಕಾಡುಪ್ರಾಣಿಗಳು ಕಾಡಂಚಿನ ಗ್ರಾಮಗಳಿಗೆ ಬಂದರೆ ಏನು ಮಾಡುವುದು, ಬದುಕುವುದು ಹೇಗೆಂದು ಜನ ಆತಂಕದಿಂದ ಬದುಕುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು