ಇತ್ತೀಚಿನ ಸುದ್ದಿ
ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್
13/06/2024, 12:26
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮಂಗಳೂರು ಮತ್ತು ಚಿಕ್ಕಮಗಳೂರು ಸಂಪರ್ಕಿಸುವ
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆಯೊಂದು ಸರಕಾರಿ ಬಸ್ಸಿಗೆ ಅಡ್ಡ ಬಂದ ಘಟನೆ ಬುಧವಾರ ರಾತ್ರಿ ನಡೆದಿದೆ.
ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಬಸ್ಸಿನ ಪಕ್ಕದಲ್ಲೇ ಹೋದ ಕಾಡಾನೆ ಹಾದು ಹೋಗಿದೆ. ಕಾಡಾನೆ ಕಂಡು ಪ್ರಯಾಣಿಕರು ಗಾಬರಿಗೊಂಡಿದ್ದಾರೆ. ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ಒಂಟಿ ಸಲಗ ನಿಂತಿತ್ತು.
ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್
ಆನೆಯನ್ನು ಕಂಡು ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದರು. ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಯಿತು. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಗೆ ಕಾಡಾನೆ ಕಾರಣವಾಯಿತು. ಸುಮಾರು ಅರ್ಧ ಗಂಟೆ ಬಳಿಕ ಆನೆ ಕಾಡಿನತ್ತ ತೆರಳಿತು.
ಕಳೆದ ಎರಡು ತಿಂಗಳಿಂದಲೂ ಚಾರ್ಮಾಡಿಯಲ್ಲೇ ಸಲಗ ಇದೆ.
ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ. ಚಾರ್ಮಾಡಿ ಘಾಟ್ ತಪ್ಪಲಿನ ಗ್ರಾಮದೊಳಕ್ಕೂ ಕೂಡ ಕಾಡಾನೆ ಬಂದಿತ್ತು. ಕಾಡಾನೆಯನ್ನು ಸ್ಥಳಾಂತರಿಸುವಂತೆ ಸ್ಥಳಿಯರ ಒತ್ತಾಯಿಸಿದ್ದರು.