ಇತ್ತೀಚಿನ ಸುದ್ದಿ
ಚಾರ್ಮಾಡಿ ಘಾಟಿಯಲ್ಲಿ 20 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು: ಅದೃಷ್ಟವಶಾತ್ ಎಲ್ಲ 6 ಮಂದಿ ಪ್ರಾಣಾಪಾಯದಿಂದ ಪಾರು
20/02/2024, 19:26
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 20 ಅಡಿ ಪ್ರಪಾತಕ್ಕೆ ಬಿದ್ದಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಪ್ರವಾಸ ಹೊರಟ 6 ಜನರಿದ್ದ ಕಾರು ಪಲ್ಟಿ ಹೊಡೆದು ಪ್ರಪಾತಕ್ಕೆ ಉರುಳಿದೆ. ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ತಡೆಗೋಡೆ ಇಲ್ಲದ ಕಾರಣ ಪ್ರಪಾತಕ್ಕೆ ಬಿದ್ದಿದೆ. ಕಾರಿನಲಿದ್ದರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಸ್ತೆಯಿಂದ 20 ಅಡಿ ಪ್ರಪಾತಕ್ಕೆ ಬಿದ್ದ ಕಾರಣ ಕಾರು ಮಗುಚಿಬಿದ್ದು ಫುಲ್ ಜಖಂಗೊಂಡಿದೆ. ಕಾರಿನದ್ದವರು ಎಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.