ಇತ್ತೀಚಿನ ಸುದ್ದಿ
ಚಾರ್ಮಾಡಿ ಘಾಟಿಯಲ್ಲಿ ಕಾರು ಮತ್ತು ಮೀನಿನ ಮಿನಿ ಗೂಡ್ಸ್ ಗಾಡಿ ಡಿಕ್ಕಿ: 5 ಮಂದಿಗೆ ಸಣ್ಣಪುಟ್ಟ ಗಾಯ
28/09/2024, 21:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾರು ಮತ್ತು ಮೀನಿನ ಮಿನಿ ಗೂಡ್ಸ್ ಗಾಡಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಮೀನು ತುಂಬಿದ್ದ ಮಿನಿ ಗೂಡ್ಸ್ ಗಾಡಿ ಪಲ್ಟಿಯಾಗಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕಾರು ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಮೀನಿನ ಗಾಡಿ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಐವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬಣಕಲ್ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.