ಇತ್ತೀಚಿನ ಸುದ್ದಿ
ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಅಡ್ಡಗಟ್ಟಿ ದರೋಡೆ: ಬೈಕ್ ನಲ್ಲಿ ಬಂದ ಮುಸುಕುದಾರಿಗಳಿಂದ 1.61 ಲಕ್ಷ ರೂ. ಲೂಟಿ
07/02/2025, 07:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ನಡುರಾತ್ರಿ ಚಲಿಸುತ್ತಿದ್ದ ಲಾರಿಯನ್ನು ಮುಸುಕುದಾರಿಗಳು ಅಡ್ಡಗಟ್ಟಿ 1.61 ಲಕ್ಷವನ್ನು ದೋಚಿ ಪರಾರಿಯಾಗಿದ್ದಾರೆ.
ಬೈಕ್ ನಲ್ಲಿ ಬಂದ ಮುಸುಕುದಾರಿಗಳು ಕೊಟ್ಟಿಗೆಹಾರ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯನ್ನು ಅಣ್ಣಪ್ಪ ದೇವಸ್ಥಾನದಿಂದ ಎರಡು ಕಿ.ಮೀ. ಹಿಂದೆಯೇ ತಡೆದು ಲಾರಿಯ ಚಾಲಕನ ಬದಿಯ ಗಾಜು ಪುಡಿಮಾಡಿ ನಗದು ದೋಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ವಾಹನದ ಚಾಲಕ ಸಲಾಂ ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಬಣಕಲ್ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.