5:45 AM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್‌: ಧರ್ಮಸ್ಥಳ ಪ್ರಕರಣದ ಎಸ್ ಐಟಿ ತನಿಖಾಧಿಕಾರಿ ಎಸ್‌ಪಿ ಸೈಮನ್ ಕಾರು ಪಲ್ಟಿ

16/06/2026, 18:41

ಮಂಗಳೂರು(reporterkarnataka.com): ಧರ್ಮಸ್ಥಳದಲ್ಲಿ ಬುರುಡೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದ ಎಸ್‌ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.


ಬೆಳ್ತಂಗಡಿ ಎಸ್‌ಐಟಿ ಕಚೇರಿಯಿಂದ ಎಸ್ಪಿ ಸಿ.ಎ. ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಿ ಧರ್ಮಸ್ಥಳ ಪ್ರಕರಣದ ಸಾಕ್ಷಿ ಚಿನ್ನಯ್ಯ ಹೈಕೋರ್ಟ್ ರಿಟ್ ಪಿಟಿಷನ್ ಹಾಕಿರುವ ಬಗ್ಗೆ ಮಾತುಕತೆ ನಡೆಸಲು ತೆರಳುತ್ತಿದ್ದಾಗ ಇಂದು ಮಧ್ಯಾಹ್ನ ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪೊಲೀಸ್ ಇಲಾಖೆಯ ಕಾರು ಪಲ್ಟಿಯಾಗಿದೆ.ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯ ವಾಗಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು