9:54 PM Wednesday12 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಶವ ಶೋಧಕ್ಕೆ ತೆರೆ: ಬರಿಗೈಯಲ್ಲಿ ವಾಪಸಾದ ಬೆಂಗಳೂರು ಪೊಲೀಸ್ ತಂಡ

05/01/2023, 21:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಎಸೆದಿದ್ದ ಎಚ್.ಶರತ್ ಅವರ ಶವದ ಶೋಧವನ್ನು ಮುಂದುವರೆಸಿದ್ದ ಪೊಲೀಸರು ಗುರುವಾರವೂ ಶೋಧ ಕಾರ್ಯ ನಡೆಸಿ ಶವ ಸಿಗದೇ ಶೋಧ ಕಾರ್ಯಕ್ಕೆ ತೆರೆ ಎಳೆದು ಕರೆ ತಂದಿದ್ದ ಆರೋಪಿಗಳ ಜತೆ ಬೆಂಗಳೂರಿಗೆ ರಾತ್ರಿ ಪ್ರಯಾಣ ಬೆಳೆಸಿದರು.

ಆರೋಪಿಗಳು ಶವ ಎಸೆದ ಜಾಗವನ್ನು ಗುರುತು ಹಚ್ಚದೇ ಇರುವುದೇ ಶವ ಶೋಧ ಕಾರ್ಯ ವಿಳಂಬವಾಗಲು ಕಾರಣವಾಯಿತು. ಮೂರು ದಿನ ಕಬ್ಬನ್ ಪಾರ್ಕ್ ಮತ್ತು ಅಶೋಕ ನಗರ ಪೊಲೀಸರು ಮೂಡಿಗೆರೆಯ ಸಾಮಾಜಿಕ ಸಕ್ರೀಯ ಕಾರ್ಯಕರ್ತರು, ಸಮಾಜ ಸೇವಕ ಮೊಹಮ್ಮದ್ ಆರೀಪ್ ಹಾಗೂ ಸ್ಥಳೀಯರ ಸಹಕಾರದಿಂದ ಚಾರ್ಮಾಡಿ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಮುಂದಿನ ಪ್ರಪಾತ, ಸೋಮನಕಾಡು ಹಾಗೂ ದಕ್ಷಿಣ ಕನ್ನಡ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಹಲವೆಡೆ ಇಂಚಿಂಚು ಶೋಧ ಕಾರ್ಯಾಚರಣೆ ನಡೆಸಿ ಶವ ಹಾಕಿದ್ದ ಗೋಣಿಚೀಲ ಶೋಧಿಸಿದರೂ ಶವ ಸಿಗದೇ ಕರೆ ತಂದಿದ್ದ ಇಬ್ಬರು ಆರೋಪಿಗಳನ್ನು ವಾಪಾಸ್ ಕರೆದುಕೊಂಡು ಹೋಗಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಶೋಧ ಕಾರ್ಯದಲ್ಲಿ ಸ್ಥಳೀಯ ಎರಡು ಜಿಲ್ಲಾ ವ್ಯಾಪ್ತಿಯ ಪತ್ರಕರ್ತರು ಕೈಜೋಡಿಸಿದ್ದರು.ಅವರೆಲ್ಲರ ಸಹಕಾರವನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಎಸಿಪಿ ರಾಜೇಂದ್ರ ಹಾಗೂ ಅವರ ವಿಶೇಷ ಪೊಲೀಸ್ ತಂಡದವರು ಅಭಿನಂದಿಸಿದರು.
ಶವ ಶೋಧ ಕಾರ್ಯಾಚರಣೆಯಲ್ಲಿ ಕಬ್ಬನ್ ಪಾರ್ಕ್ ಎಸಿಪಿ ರಾಜೇಂದ್ರ,ಠಾಣೆಯ ಸರ್ಕಲ್ ಇನ್ ಸ್ಪೆಕ್ಟರ್ ಚೈತನ್ಯ,ಅಶೋಕನಗರ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಜಿ.ಎ.ಅಶ್ವಿನಿ, ಸಹಾಯಕ ಇನ್ ಸ್ಪೆಕ್ಟರ್ ಹರಿಚಂದ್ರ, ಎಎಸೈಐ ರೇಣುಕಾ, ಪೊಲೀಸ್ ಸಿಬ್ಬಂದಿಗಳಾದ ನಂದೀಶ್, ವಸಂತ, ಜಾಕೀರ್, ಲೋಕೇಶ್, ಸೋಮು ಲಮಾಣಿ, ಪ್ರಮೋದ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು