11:15 PM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಚಾರ್ಮಾಡಿಯ ಕಾಡಿನಲ್ಲಿ ಬೆಂಕಿ: ನೂರಾರು ಎಕರೆ ಅರಣ್ಯ ಅಗ್ನಿಗಾಹುತಿ; ಜೀವಸಂಕುಲಕ್ಕೆ ಭಾರಿ ಹಾನಿ

26/01/2022, 23:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಗುಡ್ಡಕ್ಕೆ ಬೆಂಕಿ ತಗುಲಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾವುತಿಯಾಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯ ಮಾರುತ ಗುಡ್ಡದಲ್ಲಿ ನಡೆದಿದೆ. ಮಳೆಗಾಲದಲ್ಲಿ ಯಥೇಚ್ಛವಾಗಿ ಮಳೆ ಸುರಿದ ಕೊಟ್ಟಿಗೆಹಾರ ಭಾಗದಲ್ಲಿ ಈಗ ಅಷ್ಟೆ ಪ್ರಮಾಣದಲ್ಲಿ ಬಿಸಿಲು ಸುಡುತ್ತಿದೆ. ಬಿರುಬಿಸಿಲಿಗೆ ಗುಡ್ಡಗಳೆಲ್ಲಾ ಒಣಗಿ ನಿಂತಿದೆ. ಮಲಯ ಮಾರುತ ಗುಡ್ಡ ವ್ಯೂ ಪಾಯಿಂಟ್ ಆಗಿರುವುದರಿಂದ ಪ್ರವಾಸಿಗರು ಯಾರೋ ಸಿಗರೇಟ್ ಸೇದಿ ಎಸೆದಿರುವುದರಿಂದ ಬೆಂಕಿ ತಗುಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. 

ಗುಡ್ಡಕ್ಕೆ ಬೆಂಕಿ ತಗುಲಿದೆ ಎಂದು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಅಧಿಕಾರಿಗಳು ಬೆಂಕಿಯನ್ನ ನಂದಿಸಿದ್ದಾರೆ. ರಸ್ತೆಯಿಂದ ಸುಮಾರು ನಾಲ್ಕೈದು ಕಿ.ಮೀ. ದೂರದ ಎತ್ತರಕ್ಕೆ ಬೆಟ್ಟಕ್ಕೆ ದೌಡಾಯಿಸಿದ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಲಯ ಮಾರುತ ಗುಡ್ಡವೆಂದರೆ ಸಾವಿರಾರು ಎಕರೆ ವಿಸ್ತಾರವಾದ ಗುಡ್ಡ. ಒಂದು ಗುಡ್ಡದಿಂದ ಮತ್ತೊಂದು ಗುಡ್ಡಕ್ಕೆ ಲಿಂಕ್ ಇದೆ. ಸೂಕ್ತ ಸಮಯದಲ್ಲಿ ಬೆಂಕಿಯನ್ನ ನಂದಿಸದಿದ್ದರೆ ಆಗುವ ಅನಾಹುತ ಭಾರೀ ದೊಡ್ಡದ್ದು. ಅದನ್ನ ನಿಭಾಯಿಸಲು ಕಷ್ಟ ಸಾಧ್ಯ.


ಸಾವಿರಾರು ಪ್ರಾಣಿಪಕ್ಷಿಗಳು ಬೆಂಕಿಯ ಕೆನ್ನಾಲಿಗೆ ಬಲಿಯಾಗುತ್ತವೆ. ಈಗಲೇ ಗುಡ್ಡಕ್ಕೆ ಬೆಂಕಿ ಬಿದ್ದ ಪರಿಣಾಮ ನೂರಾರು ಪ್ರಾಣಿ-ಪಕ್ಷಿಗಳು, ಕೀಟಗಳು ಬೆಂಕಿಯಲ್ಲಿ ಬೆಂದಿವೆ. ಅರಣ್ಯ ಇಲಾಖೆ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಸಾವಿರಾರು ಎಕರೆ ಅರಣ್ಯ ಹಾಗೂ ಜೀವಸಂಕುಲ ಅಪಾಯದಿಂದ ಪಾರಾದಂತಿದೆ. ಅರಣ್ಯ ಪ್ರದೇಶದಲ್ಲಿ ಬೆಂಕಿಯ ಸಣ್ಣ ಕಿಡಿ ಬಿದ್ದರೂ ಅರಣ್ಯ ಒಂದೇ ಸಮನೆ ಹೊತ್ತಿ ಉರಿಯುತ್ತೆ. ಇದಿನ್ನು ಜನವರಿ, ಮಾರ್ಚ್, ಏಪ್ರಿಲ್ ವೇಳೆಗೆ ಅರಣ್ಯ ಅಧಿಕಾರಿಗಳು ಕಾಡನ್ನ ಕಣ್ಣಲ್ಲಿ ಕಣ್ಣಿಟ್ಟು ಮಕ್ಕಳಂತೆ ಕಾಪಾಡಬೇಕಿದೆ. ಸ್ವಲ್ಪ ಎಚ್ಚರ ತಪ್ಪಿದರೂ ದೊಡ್ಡ ಅನಾಹುತ ಕಟ್ಟಿಟ್ಟ ಬುತ್ತಿ. ಈಗಾಗಲೇ ಈ ವರ್ಷ ಬಿಸಿಲು ಹೆಚ್ಚಿರುತ್ತೆ ಎಂದು ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ, ಜಿಲ್ಲೆ ಸೇರಿದಂತೆ ರಾಜ್ಯದ ಅರಣ್ಯವನ್ನ ಸೂಕ್ಷ್ಮವಾಗಿ ಕಾಪಾಡಬೇಕಾದ ಅನಿವಾರ್ಯತೆ ಬಹಳಷ್ಟಿದೆ. ಜಿಲ್ಲೆಯ ಅರಣ್ಯ ಇಲಾಖೆ ಕೂಡ ಕಾಡನ್ನ ರಕ್ಷಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಇಂದು ಕೂಡ ಬೆಂಕಿ ಬಿದ್ದಿರೋ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಗುಡ್ಡ ಹತ್ತಿ ಸ್ಥಳಕ್ಕೆ ಹೋಗಿ ಬೆಂಕಿ ನಂದಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳಿಯರು ಸಾಥ್ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು