9:48 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

Cheetah | ಅರಣ್ಯ ಇಲಾಖೆಯಲ್ಲಿ ತಕ್ಷಣಕ್ಕೆ ಲಭ್ಯವಿಲ್ಲದ ಅರಿವಳಿಕೆ ತಜ್ಞರು: ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣಬಿಟ್ಟ ಚಿರತೆ

21/02/2025, 22:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟಿದೆ.
ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ಗುರುವಾರ ರಾತ್ರಿಯೇ ಚಿರತೆ ಸಿಲುಕಿದೆ. ಶುಕ್ರವಾರ ಬೆಳಿಗ್ಗೆ ಗಮನಿಸಿದ ಸ್ಥಳೀಯರು, ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆ ರಕ್ಷಣೆಗೆ ಪ್ರಯತ್ನಿಸಿದರು. 
ಶಿವಮೊಗ್ಗದಿಂದ ಅರಿವಳಿಕೆ ತಜ್ಞರನ್ನು ಕರೆಸಿ ರಕ್ಷಣೆ ಮಾಡಲು ಮುಂದಾದರು. ಅಷ್ಟರಲ್ಲಿ ಚಿರತೆ ಉಸಿರಾಟ ನಿಲ್ಲಿಸಿದ್ದು, ಮೃತಪಟ್ಟಿದೆ ಎಂದು ಅಧಿಕಾರಿಗಳು ಘೋಷಣೆ ಮಾಡಿದರು. ಉರುಳು ಬಿಡಿಸಿಕೊಳ್ಳುವ ಪ್ರಯತ್ನದಲ್ಲಿ ಸೊಂಟಕ್ಕೆ ಇಳಿದಿದ್ದ ಉರುಳು ಮತ್ತಷ್ಟು ಬಿಗಿಯಾಗಿ ಚಿರತೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದರು.
ಕಾಡು ಹಂದಿಗೆ ಹಾಕಿರುವ ಉರುಳಿಗೆ ಚಿರತೆ ಸಿಲುಕಿರುವ ಸಾಧ್ಯತೆ ಇದೆ. ಮೊದಲಿಗೆ ಕಾಫಿ ತೋಟದ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು. ಮರಣೋತ್ತರ ಪರೀಕ್ಷೆ ಬಳಿಕ ತನಿಖೆ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು