7:37 AM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಚೀಟಿಯಲ್ಲಿ ಖುಲಾಯಿಸಿದ ಅದೃಷ್ಟ: ಬಿಜೆಪಿ- ಕಾಂಗ್ರೆಸ್ ಸಮಬಲವಿರುವ ಕಿತ್ತೂರು ಪಟ್ಟಣ ಪಂಚಾಯತಿ ‘ಕೈ’ವಶ

31/01/2025, 16:25

ಬೆಳಗಾವಿ(reporterkarnataka.com): ತೀವ್ರ ಕುತೂಹಲ ಕೆರಳಿಸಿದ್ದ ಕಿತ್ತೂರು ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಉಭಯ ಪಕ್ಷಗಳು ಸಮಬಲವಿರುವ ಕಿತ್ತೂರು ಪಪಂನಲ್ಲಿ ಚೀಟಿ ಎತ್ತುವ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಸಲಾಯಿತು.
ಪಟ್ಟಣ ಪಂಚಾಯತಿ ಸಭಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ನ ಜೈಸಿದ್ದರಾಮ (ಸಿದ್ದು ) ಮಾರಿಹಾಳ ಹಾಗೂ ಉಪಾಧ್ಯಕ್ಷರಾಗಿ ಅದೇ ಪಕ್ಷದ ಸಮೀರಾಬಾನು ಸುತಗಟ್ಟಿ ಆಯ್ಕೆಯಾಗಿದ್ದಾರೆ. ಚೀಟಿ ಎತ್ತುವ ಮೂಲಕ ಆಯ್ಕೆ ನಡೆದಿದೆ.
ಅಧ್ಯಕ್ಷ ಸ್ಥಾನ ಸಾಮಾನ್ಯ ಅಭ್ಯರ್ಥಿಗೆ ಮೀಸಲಾಗಿತ್ತು. ಕಾಂಗ್ರೆಸ್ ಪಕ್ಷದಿಂದ ಜೈಸಿದ್ದರಾಮ (ಸಿದ್ದು) ಮಾರಿಹಾಳ ಹಾಗೂ ಬಿಜೆಪಿಯಿಂದ ನಾಗರಾಜ ಅಸುಂಡಿ ಉಮೇದುವಾರಿಕೆ ಸಲ್ಲಿಸಿದ್ದರು.
ಉಪಾಧ್ಯಕ್ಷ ಸ್ಥಾನವೂ ಸಾಮಾನ್ಯ ಮಹಿಳೆ ಮೀಸಲಾತಿಗೆ ಒಳಪಟ್ಟಿತ್ತು. ಕಾಂಗ್ರೆಸ್ ನಿಂದ ಸಮೀರಾಬಾನು ಸುತಗಟ್ಟಿ ಹಾಗೂ ಬಿಜೆಪಿಯಿಂದ ಲಕ್ಷ್ಮೀ ಬಡಿಗೇರ ಉಮೇದುವಾರಿಕೆ ಸಲ್ಲಿಸಿದ್ದರು. ಉಭಯ ಪಕ್ಷಗಳಲ್ಲಿ ಸಮಬಲವಿರುವ ಕಾರಣ ಎಲ್ಲರ ನಿರೀಕ್ಷೆಯಂತೆ ಚೀಟಿ ಎತ್ತುವ ಮೂಲಕ ಚುನಾವಣೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆ ಮಾಡಲಾಯಿತು. ಇದಕ್ಕೂ ಮೊದಲು ಕೈ ಎತ್ತುವ ಮೂಲಕ ಮತ ಚಲಾಯಿಸುವಂತೆ ಎಲ್ಲ ಸದಸ್ಯರಿಗೂ ಚುನಾವಣಾಧಿಕಾರಿಗಳು ಸೂಚನೆ ನೀಡಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಾಗಿ ಶಾಸಕ ಬಾಬಾಸಾಹೇಬ ಪಾಟೀಲ್ ಮತ ಸೇರಿದಂತೆ ಒಟ್ಟು 10 ಮತಗಳು ಚಲಾವಣೆಗೊಂಡವು. ಇದರಂತೆಯೇ ಬಿಜೆಪಿ ಅಭ್ಯರ್ಥಿಗಳ ಪರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ ಸೇರಿದಂತೆ ಒಟ್ಟು 10 ಮತಗಳು ಬಿಜೆಪಿ ಅಭ್ಯರ್ಥಿಗಳ ಪರ ಚಲಾವಣೆಗೊಂಡವು.
ಈ ಪ್ರಕಾರ ಸಮಬಲವಿರುವ ಕಾರಣದಿಂದಾಗಿ ಚುನಾವಣಾಧಿಕಾರಿಗಳು ಚೀಟಿ ಎತ್ತುವ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ
ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು