ಇತ್ತೀಚಿನ ಸುದ್ದಿ
ಕಡಲ ನಗರಿ ಮಂಗಳೂರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ದಂಡು: ಪ್ರಜಾ ಸೌಧ ಉದ್ಘಾಟನೆ
16/05/2025, 12:06

ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.com
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ದಂಡು ಇಂದು ನಗರಕ್ಕೆ ಆಗಮಿಸಲಿದೆ.
ಇಂದು ಮಧ್ಯಾಹ್ನ 3:20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮುಖ್ಯಮಂತ್ರಿ ಜತೆ ಕಂದಾಯ ಸಚಿವ ಕೃಷ್ಣಭೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಆಗಮಿಸುವರು. ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಈಗಾಗಲೇ ನಗರಕ್ಕೆ ಆಗಮಿಸಿದ್ದಾರೆ. ನಗರದ ಕದ್ರಿ ಪಾರ್ಕ್ ನಲ್ಲಿ 3 ದಿನಗಳ ಕಾಲ ನಡೆಯಲಿರುವ ಮಾವು ಮೇಳವನ್ನು ಅವರು ಉದ್ಘಾಟಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲು ನಗರದ ಉರ್ವಾ ಮಾರ್ಕೆಟ್‍ನಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ. ನಂತರ ಸಂಜೆ 4:15 ಕ್ಕೆ ಪಡೀಲ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನೂತನ ಕಚೇರಿ “ಪ್ರಜಾಸೌಧ” ಉದ್ಘಾಟನೆ ನರೆವೇರಿಸಲಿದ್ದಾರೆ. ಐತಿಹಾಸಿಕ ದರ್ಖಾಸ್ತು ಪೋಡಿ ಅಭಿಯಾನದ ಅಂಗವಾಗಿ 8000 ಮಂದಿಗೆ ಆರ್.ಟಿ.ಸಿ ವಿತರಣೆ ಮಾಡಲಿದ್ದಾರೆ. ನಂತರ ಗುರುಪುರ ನಾಡಕಚೇರಿ ಉದ್ಘಾಟನೆ, ಸಣ್ಣ ನೀರಾವರಿ ಇಲಾಖೆ ಕಛೇರಿ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ, ವಿವಿಧ ಸರಕಾರಿ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6:30ಕ್ಕೆ 5 ವರ್ಷಗಳಿಗೊಮ್ಮೆ ನಡೆಯುವ ಸೈಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ರಾತ್ರಿ 8:15ಕ್ಕೆ ಮುಖ್ಯಮಂತ್ರಿಗಳು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.