ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಆಗಮನ: ವಿಮಾನ ನಿಲ್ದಾಣದಲ್ಲಿ ಗೌರವ ರಕ್ಷೆ ಸ್ವೀಕಾರ
03/12/2025, 13:06
ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕಾಗಿ ಬುಧವಾರ ಮಂಗಳೂರಿಗೆ ಆಗಮಿಸಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜ ಮತ್ತಿತರರು ಸ್ವಾಗತಿಸಿದರು.












