3:58 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

04/09/2025, 19:51

ಬೆಂಗಳೂರು(reporterkarnataka.com): ಕೆಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು.


ನಂತರದ ಮಾತನಾಡಿದ ಅವರು ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದರು.
ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ ಎಂದು ಅವರು ತಿಳಿಸಿದರು.

*ಸಂಸ್ಕರಿಸಿದ ನೀರು ಬೆಳೆಗಳಿಗೆ ಯೋಗ್ಯವಲ್ಲ ಎನ್ನುವುದು ಅಪಪ್ರಚಾರ: ಇದರಲ್ಲಿ ಸತ್ಯಾಂಶವಿಲ್ಲ*
ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುವುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ನಿರೂಪಿತವಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಕೆ.ಸಿ.ವ್ಯಾಲಿ ಎರಡನೇ ಹಂತ ಡಿಸೆಂಬರ್‌ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ 272 ಕೆರೆಗಳನ್ನು ತುಂಬಿಸಲು ಸಾಧ್ಯವಿದೆ.
ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳಲಿಲ್ಲದೆ ಇರುವುದರಿಂದ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದ್ದು, 446 ಕೋಟಿಗಳ ವೆಚ್ಚದಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು