4:27 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಬೆಂಗಳೂರು ನಗರ ರಸ್ತೆಗಳ ಪರಿಶೀಲನೆಗೆ ಮುಖ್ಯಮಂತ್ರಿಗಳ ಸಿಟಿರೌಂಡ್ಸ್

27/09/2025, 20:16

*ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶ- ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೆಂಗಳೂರು(reporterkarnataka.com): ಮಳೆಗಾಲದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದ್ದು, ಇವುಗಳನ್ನು ದುರಸ್ತಿಗೊಳಿಸಿ, ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಬೆಂಗಳೂರು ನಗರ ರಸ್ತೆಗಳ ಪರಿಸ್ಥಿತಿ ಅರಿಯಲು ಸಿಟಿರೌಂಡ್ಸ್ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.


ನಗರದ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಲಾಗಿದ್ದು, ಈ ಕಾರ್ಯ ಗುಣಮಟ್ಟದಿಂದ ಕೂಡಿರಬೇಕು. ರಸ್ತೆ ದುರಸ್ತಿ ಕಾರ್ಯ ಸರಿಯಿಲ್ಲದ ಕಾರಣ, ಸಂಬಂಧಪಟ್ಟ ಎಕ್ಸಿಕ್ಯೂಟಿವ್ ಇಂಜಿನಿಯರ್ ನ್ನು ಅಮಾನತ್ತುಗೊಳಿಸಲಾಗಿದೆ. ಗುಂಡಿ ಮುಚ್ಚಲು ಕೇವಲ ಜಲ್ಲಿ ಹಾಕಿ ಟಾರ್ ಹಾಕದೇ ಹಾಗೇ ಬಿಟ್ಟಿದ್ದ ಕಾರಣ, ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಹೆಣ್ಣೂರು ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ರಸ್ತೆಯ ನಿರ್ವಹಣೆಯನ್ನು ಸಂಬಂಧಪಟ್ಟ ಗುತ್ತಿಗೆದಾರರ ಜವಾಬ್ದಾರಿಯಾಗಿರುತ್ತದೆ. 5 ಕಿ.ಮೀ. ರಸ್ತೆ ಕಾಮಗಾರಿಯನ್ನು ಕಿ.ಮೀ. ಒಂದಕ್ಕೆ 13 ಕೋಟಿಗಳನ್ನು ಸರ್ಕಾರ ವ್ಯಯಿಸುತ್ತಿದೆ. ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ. ರಸ್ತೆಗಳಲ್ಲಿ ಯಾವುದೇ ಗುಂಡಿಗಳಿಲ್ಲದಂತೆ ಮುಚ್ಚಬೇಕೆಂದು ಸೂಚನೆ ನೀಡಲಾಗಿದೆ ಎಂದರು.

*ಬಿಜೆಪಿ ಅವಧಿಯಲ್ಲಿ ರಸ್ತೆ ದುರಸ್ತಿ ನಡೆಯಲಿಲ್ಲ:*
ರಸ್ತೆ ಪರಿಶೀಲನೆ ನಡೆಯಲಿದೆಯೆಂಬ ಕಾರಣಕ್ಕೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, ಗುಂಡಿಗಳಿಂದಾಗಿ ರಸ್ತೆ ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಸ್ತೆ ಗುಂಡಿಗಳಿರುವುದು ನಿಜ. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರಸ್ತೆ ಗುಂಡಿಗಳ ದುರಸ್ತಿ ನಡೆದಿದ್ದರೆ, ರಸ್ತೆಗಳು ಇಂತಹ ಪರಿಸ್ಥಿತಿಗೆ ತಲುಪುತ್ತಿರಲಿಲ್ಲ. ಮಳೆಗಾಲ ಮುಗಿಯುವುದರೊಳಗೆ ರಸ್ತೆ ಗುಂಡಿಗಳನ್ನು ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

*ನ್ಯಾಯಾಲಯದ ನಿರ್ದೇಶನದಂತೆ ಸಮೀಕ್ಷೆ:*
ಸಮೀಕ್ಷೆಯಲ್ಲಿ ಯಾರೂ ಭಾಗವಹಿಸಬಾರದೆಂದು ಸಂಸದ ತೇಜಸ್ವಿ ಸೂರ್ಯ ಅವರು ಕರೆನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮೀಕ್ಷೆಯನ್ನು ತಡೆಯಬೇಕೆಂದು ನ್ಯಾಯಾಲಯಕ್ಕೆ ಹೋಗಲಾಗಿತ್ತು. ನ್ಯಾಯಾಲಯ ನೀಡಿರುವ ನಿರ್ದೇಶನಗಳಂತೆ ಸಮೀಕ್ಷೆಯನ್ನು ನಡೆಸಲಾಗುವುದು. ಈಗಾಗಲೇ ಸುಮಾರು 10 ಲಕ್ಷ ಜನರ ಸಮೀಕ್ಷೆ ಪೂರ್ಣಗೊಂಡಿದೆ ಎಂದರು.

*ತ್ಯಾಜದ ಸಮರ್ಪಕ ನಿರ್ವಹಣೆಗೆ ಸೂಚನೆ:*
ತ್ಯಾಜ್ಯ ನಿರ್ವಹಣೆ ಸಮಸ್ಯೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಸ್ತೆಗಳ ಕೆಲೆವೆಡೆಗಳಲ್ಲಿ ತ್ಯಾಜ್ಯವನ್ನು ನಿರ್ವಹಿಸದೇ ಹಾಗೇ ಬಿಟ್ಟಿದ್ದು, ತ್ಯಾಜ್ಯವನ್ನು ತ್ವರಿತವಾಗಿ ತೆಗೆಯಬೇಕೆಂದು ಸೂಚನೆ ನೀಡಲಾಗಿದ್ದು,, ಇಲ್ಲವಾದಲ್ಲಿ ಸಂಬಂಧಪಟ್ಟ ಕಮೀಷನರ್ ಹಾಗೂ ಇಂಜಿನಿಯರ್ ಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು