ಇತ್ತೀಚಿನ ಸುದ್ದಿ
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ದಿನವಿಡೀ ಧಾರಾಕಾರ ಜಡಿಮಳೆ: ಚಾರ್ಮಾಡಿ ಘಾಟಿಯಲ್ಲಿ ಮಂಜು ಮುಸುಕಿದ ವಾತಾವರಣ
10/06/2023, 22:32
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ ಸುತ್ತಮುತ್ತ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿ ದಿನವಿಡೀ ದಾರಾಕಾರ ಮಳೆಯಾಗುತ್ತಿದೆ.
ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಭಾಗದಲ್ಲೂ ಮಂಜು ಮುಸುಕಿನ ವಾತಾವರಣವಿದ್ದು ಮುಂಗಾರು ಮಳೆ ಆರಂಭವಾದಂತೆ ಭಾಸವಾಗಿದೆ. ಸುರಿಯುತ್ತಿರುವ ಜಡಿ ಮಳೆಯಿಂದ ವಾತಾವರಣ ತಂಪಾಗಿದ್ದು ಕೃಷಿಗೆ ಅನುಕೂಲವಾಗಿದೆ.ಹದ ಮಳೆಯಾಗುತ್ತಿರುವುದರಿಂದ ಮನೆ ನಿರ್ಮಾಣ ಕಾರ್ಯಗಳು ವಿಳಂಬವಾಗಿದೆ.ಕೊಟ್ಟಿಗೆಹಾರದಲ್ಲಿ ಜಡಿ ಮಳೆ ಸುರಿಯುತ್ತಿರುವುದರಿಂದ ಕಾಫಿ ತೋಟಗಳಿಗೆ ಗೊಬ್ಬರ ಹಾಕಲು ಸಕಾಲವಾಗಿದೆ.
ಚಾರ್ಮಾಡಿ ಘಾಟ್ನಲ್ಲೀ ಮಂಜು ಮುಸುಕಿನ ವಾತಾವರಣ ಇರುವುದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ.ಚಂಡ ಮಾರುತದ ವೈಪರೀತ್ಯದಿಂದ ಮಳೆಯಾಗುತ್ತಿದ್ದು ಜನರು ಮಳೆಗಾಲಕ್ಕೆ ಸಿದ್ದರಾಗುವ ಮುನ್ನವೆ ಬಂದ ಮಳೆಯಿಂದ ಕಟ್ಟಡ ಕಾರ್ಮಿಕರಿಗೆ ಕೆಲಸ ನಿರ್ವಹಿಸಲು ತೊಂದರೆ ಉಂಟಾಯಿತು.ಜಡಿಮಳೆಯಿಂದ ಕೃಷಿ ಚಟುವಟಿಕೆಗಳು ಗರಿಗೆದರಿವೆ.ಮಳೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ.