6:09 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅಜಾನ್ ಗೆ ಪ್ರತಿಯಾಗಿ ದೇಗುಲಗಳಲ್ಲಿ ಮೊಳಗಿದ ಸುಪ್ರಭಾತ

09/05/2022, 21:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ ಆಜಾನ್ ವರ್ಸಸ್ ಸುಪ್ರಭಾತ ಆರಂಭವಾಗಿರುವ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ಬೆಳಗ್ಗೆ 5.15ಕ್ಕೆ ಮುಸ್ಲಿಮರು ಆಜಾನ್ ಮೊಳಗುವ ವೇಳೆ ಹಿಂದೂಗಳ ದೇವಸ್ಥಾನದಲ್ಲಿ ಸುಪ್ರಭಾತ ಮೊಳಗಿದೆ.


ಚಿಕ್ಕಮಗಳೂರು ನಗರದ ಶಂಕರಪುರ ಏರಿಯಾದಲ್ಲಿರುವ ಕೊಂಗಮಾಟಮ್ಮ ದೇವಾಲಯದಲ್ಲಿ ಸುಪ್ರಭಾತ ಮೊಳಗಿದೆ. ಕಳೆದ ರಾತ್ರಿಯೇ ದೇವಾಲಯದ ಮೇಲ್ಭಾಗ ಮೈಕ್ ಕಟ್ಟಿ ಎಲ್ಲಾ ಸಿದ್ಧತೆ ನಡೆಸಿದ್ದ ಶ್ರೀರಾಮಸೇನೆ ಕಾರ್ಯಕರ್ತರು ಬೆಳಗ್ಗೆ 5.15ಕ್ಕೆ  ಸುಪ್ರಭಾತ ಹಾಕಿದ್ದಾರೆ. ಕೋಟೆ ವೀರಭದ್ರಸ್ವಾಮಿ ದೇವಸ್ಥಾನ, ಕಲ್ದೊಡ್ಡಿ ಶಿವನ ದೇವಸ್ಥಾನ, ವಿಜಯಪುರ ಆಂಜನೇಯ ಸ್ವಾಮಿ ದೇವಸ್ಥಾನ, ನೇಕಾರ ಬೀದಿ ಶ್ರೀರಾಮನ ದೇವಸ್ಥಾನ, ಅಗಸರ ಬೀದಿ ಬನಶಂಕರಿ ದೇವಸ್ಥಾನದಲ್ಲಿ ಸುಪ್ರಭಾತ ಮೊಳಗುತ್ತಿದೆ. ಸುಪ್ರಭಾತ ಜೊತೆ ಶ್ರೀರಾಮನ ಭಕ್ತಿ ಗೀತೆ ” ನಿನ್ನೆಗಳ ಪಾಪವ ಸೊನ್ನೆಯಾಗಿಸೋ ರಾಮ” ಎಂಬ ಭಕ್ತಿ ಗೀತೆಯೂ ಮೊಳಗಿದೆ. ಇನ್ನು ಮುಂದೆ ದಿನಕ್ಕೆ ಮೂರು ಬಾರಿ ದೇವಾಲಯಗಳಲ್ಲಿ ಸುಪ್ರಭಾತ ಹಾಕಲು ಶ್ರೀರಾಮಸೇನೆ ಕಾರ್ಯಕರ್ತರು ತೀರ್ಮಾನಿಸಿ ದೇವಾಲಯದ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿದ್ದಾರೆ. ಮುಸ್ಲಿಮರು ನಮಾಜ್ ಕೂಗುವ ವೇಳೆ ಬೆಳಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಮೂರು ಹೊತ್ತು ಸುಪ್ರಭಾತ ಹಾಕಲು ತೀರ್ಮಾನಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು