12:21 AM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಮಳೆ: ಭತ್ತ, ಅಡಿಕೆ, ಕಾಫಿ, ಮೆಣಸು ಬೆಳೆಗಾರರು ಕಂಗಾಲು

24/01/2023, 16:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗಳವಾರ ಭಾರಿ ಮಳೆಯಾಗಿದೆ. ಹಲವು ತಾಸು ಧಾರಾಕಾರ ಮಳೆ ಸುರಿದಿದೆ.
ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್, ಮತ್ತಿಕಟ್ಟೆ, ನಿಡುವಾಳೆ, ಗುತ್ತಿ, ಭೈರಾಪುರ, ಕಂದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಜನವರಿಯಲ್ಲಿ ಮಳೆ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಈ ಮಳೆಯಿಂದ ಭತ್ತ, ಅಡಿಕೆ, ಕಾಫಿ, ಮೆಣಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಮಳೆಯಿಂದ ರೈತರು, ಕೂಲಿ ಕಾರ್ಮಿಕರು, ಬೆಳೆಗಾwರರು ಹೈರಾಣರಾಗಿದ್ದಾರೆ.


2022ರಲ್ಲೂ ವರ್ಷ ಪೂರ್ತಿ ಮಳೆ ಸುರಿದಿತ್ತು.ಈ ವರ್ಷವೂ ಜನವರಿಯಲ್ಲೇ ಮಳೆ ಕಂಡು ಭವಿಷ್ಯದ ಬಗ್ಗೆ ಬೆಳೆಗಾರರು ಕಂಗಾಲಾಗಿದ್ದಾರೆ.ಅಳಿದುಳಿದ ಬೆಳೆಯನ್ನೂ ಉಳಿಸಿಕೊಳ್ಳಲಾಗದೆ ಚಿಂತಾಕ್ರಾಂತರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು