10:40 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಉಸ್ತುವಾರಿ ಸಚಿವರ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಕನ್ನಡ ಧ್ವಜಾರೋಹಣ

01/11/2022, 14:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜು ಅವರ ಗೈರು ಹಾಜರಿನಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ 67ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ದಾವಣಗೆರೆ ಹಾಗೂ ಚಿಕ್ಕಮಗಳೂರು ಎರಡು ಜಿಲ್ಲೆಗೂ ಉಸ್ತುವಾರಿ ಸಚಿವರಾಗಿರುವ ಭೈರತಿ ಬಸವರಾಜು ದಾವಣಗೆರೆ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾದ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಧ್ವಜಾರೋಹಣ ನೆರವೇರಿಸಿದರು.

ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಇದೇ ಮೊದಲ ಬಾರಿಗೆ ಶಾಲಾ-ಮಕ್ಕಳು, ಪೊಲೀಸರ ಜೊತೆ ಪಥಸಂಚಲನದಲ್ಲಿ ಕಂಸಾಳೆ, ಡೊಳ್ಳು, ಛಂಡೇ ವಾಧ್ಯ, ವೀರಗಾಸೆ, ಸ್ಥಬ್ಧಚಿತ್ರ ಸೇರಿದಂತೆ ನಾಡಿನ ಸಂಸ್ಕೃತಿಯ ಪರಂಪರೆಯನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರವಣಿಗೆಗೂ ಅವಕಾಶ ನೀಡಲಾಗಿತ್ತು.


ಕಾರ್ಯಕ್ರಮಕ್ಕೂ ಮುನ್ನ ಕನ್ನಡ ರಾಜ್ಯೋತ್ಸವದ ಮೆರವಣಿಗೆ ವೇಳೆ ಜಿಲ್ಲಾಡಳಿತ ಹಾಗೂ ಶಾಸಕ ಸಿ.ಟಿ.ರವಿ ವಿರುದ್ಧ ಅಸಮಾಧಾನ ಹೊರಹಾಕಿ ಕಪ್ಪು ಪಟ್ಟಿ ಪ್ರದರ್ಶಿಸಲು ಸಿದ್ಧತೆ ನಡೆಸಿದ್ದ 20ಕ್ಕೂ ಹೆಚ್ಚು ದಲಿತ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿದರು. ಕಳೆದ ನಾಲ್ಕೈದು ದಿನಗಳಿಂದ ನಗರದ ಆಜಾದ್ ಪಾರ್ಕ್ ಬಳಿ, ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಸಮೀಪ ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ತೋಟದ ಮಾಲೀಕನ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದವು. ತೋಟದ ಮಾಲೀಕನನ್ನ ಬಂಧಿಸದ ಕಾರಣ ಕಾರ್ಯಕರ್ತರು ಜಿಲ್ಲಾಡಳಿತದ ಮೇಲೆ ಆಕ್ರೋಶ ಹೊರಹಾಕುವ ವೇಳೆ ಎಲ್ಲರನ್ನೂ ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು