6:02 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ: ಇಶಾ ಫೌಂಡೇಶನ್ ಆದಿ ಯೋಗಿ ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಹೈಕೋರ್ಟ್ ತಡೆ; ಯಥಾಸ್ಥಿತಿ ಕಾಪಾಡಲು ಸೂಚನೆ

11/01/2023, 19:45

ಚಿಕ್ಕಬಳ್ಳಾಪುರ(reporterkarnataka.com): ಇಲ್ಲಿನ ನಂದಿಬೆಟ್ಟದ ಆವಲಗುರ್ಕಿ ಬಳಿ ನಿರ್ಮಾಣವಾಗುತ್ತಿರುವ ಆದಿಯೋಗಿ ಪ್ರತಿಮೆಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ನಡೆಸಬಾರದು ಎಂದು ರಾಜ್ಯ ಹೈಕೋರ್ಟ್‌ ಆದೇಶ ನೀಡಿದೆ. ಪ್ರತಿಮೆ ನಿರ್ಮಾಣವಾಗುತ್ತಿರುವ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.
ರಾಜ್ಯ ಸರ್ಕಾರವು ಇಶಾ ಯೋಗ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಜಮೀನು ಮಂಜೂರು ಮಾಡಿದ್ದು, ಇದು ರೈತರ ಬದುಕಿಗೆ ಮತ್ತು ಪರಿಸರಕ್ಕೆ ಹಾನಿ ಮಾಡುತ್ತದೆ ಎಂದು ಆರೋಪಿಸಿ ಜಿಲ್ಲೆಯ ಐವರು ರೈತರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ಈ ಆದೇಶ ನೀಡಿದೆ.

ನಂದಿಬೆಟ್ಟಕ್ಕೆ ಐತಿಹಾಸಿಕ ಮಹತ್ವವಿದ್ದು, ಇಶಾ ಯೋಗ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಕೆರೆ, ಕುಂಟೆ, ಕಂಟಿಗಳು ಹಾಗೂ ಗೋಮಾಳ ವ್ಯಾಪ್ತಿಯ ಜಮೀನನ್ನು ಮಂಜೂರು ಮಾಡಿದೆ. ಇದರ ಸುತ್ತಮುತ್ತಲಿನ ಜಮೀನನ್ನು ಪರಭಾರೆ ಮಾಡಿರುವ ಕಾರಣ ರೈತರ ಬದುಕಿಗೆ ಹಾಗೂ ಪರಿಸರಕ್ಕೆ ಭರಿಸಲಾಗದ ಹಾನಿಯಾಗಲಿದೆ. ಪರಿಸರದ ಸೂಕ್ಷ್ಮ ವಲಯಕ್ಕೆ ಒಳಪಡುವ ಪ್ರದೇಶವನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಕಾನೂನು ಬಾಹಿರವಾಗಿದ್ದು, ಇಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಆದೇಶಿಸಬೇಕ ಎಂದು ರೈತರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ರೈತರ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಪೀಠ, ಒಕ್ಕೂಟ ಸರ್ಕಾರದ ಪರಿಸರ ಸಚಿವಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇಶಾ ಯೋಗ ಕೇಂದ್ರ ಸೇರಿದಂತೆ ಒಟ್ಟು 16 ಮಂದಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ಆದಿಯೋಗಿ ಪ್ರತಿಮೆಯನ್ನು ಉಪ ರಾಷ್ಟ್ರಪತಿ ಜಗದೀಪ್ ಧನಕರ್‌‌ ಅವರು ಜನವರಿ 15 ರಂದು ಉದ್ಘಾಟಿಸಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು