11:44 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಕುಂಪಲದಲ್ಲಿ ಅತ್ಯಾಚಾರ: ಆರೋಪಿ ಬಂಧನ; ಪೊಕ್ಸೊ ಪ್ರಕರಣ ದಾಖಲು

02/01/2024, 15:03

 

ಉಳ್ಳಾಲ(reporterkarnataka.com): ಚಿಕ್ಕಮಗಳೂರು ಜಿಲ್ಲೆಯ ದಲಿತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಅಣಜೂರು ಗ್ರಾಮದ ಮೊಹಮ್ಮದ್ ರಝೀನ್ (25) ಎಂದು ಗುರುತಿಸಲಾಗಿದೆ. ಈತ
ಪರಿಶಿಷ್ಟ ಜಾತಿಯ 17 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದಾಗಿ ದೂರಲಾಗಿದೆ.
ಮೊಹಮ್ಮದ್ ರಝೀನ್
ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿ ನಾಲ್ಕು ತಿಂಗಳ ಹಿಂದೆ ನಗರದ ಪಂಪ್‌ವೆಲ್‌ಗೆ ಆಕೆಯನ್ನು ಬಸ್‌ನಲ್ಲಿ ಕರೆದುಕೊಂಡು ಬಂದಿದ್ದ. ನಂತರ ಆತನ ಆಟೊರಿಕ್ಷಾದಲ್ಲಿ ಆಕೆಯನ್ನು ಕುಂಪಲದ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿ ಒತ್ತಾಯಪೂರ್ವಕವಾಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ದೂರು ದಾಖಲಾಗಿದೆ.
ಬಾಲಕಿಯು ನೀಡಿದ ದೂರಿನ ಆಧಾರದಲ್ಲಿ ಆರೋಪಿ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು