9:54 PM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಗಾಳಿ- ಮಳೆ ಅಬ್ಬರ: ತರೀಕೆರೆ, ಎನ್. ಆರ್. ಪುರದಲ್ಲಿ ಮನೆ ಕುಸಿತ

22/07/2023, 12:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಕಡಿಮೆಯಾದರೂ ಮನೆಗಳು ಕುಸಿದು ಬೀಳೋದು ನಿಲ್ಲುತ್ತಿಲ್ಲ. ಕಾಫಿನಾಡ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಬಯಲುಸೀಮೆ ಭಾಗದಲ್ಲೂ ಅಲಲ್ಲೇ ಮಳೆ ಸುರಿದಿದೆ. ದಟ್ಟಕಾನನದ ಮಲೆನಾಡು ತಾಲೂಕುಗಳಾದ ಮೂಡಿಗೆರೆ, ಕಳಸ ಭಾಗದಲ್ಲಿ ತುಸು ಹೆಚ್ಚಾಗೇ ಮಳೆ ಇದೆ. ಆದರೆ, ಗಾಳಿಯ ಅಬ್ಬರ ಜೋರಾಗಿದೆ. ಮಳೆ-ಗಾಳಿಗೆ ತರೀಕೆರೆ ಹಾಗೂ ಎನ್.ಆರ್.ಪುರ ತಾಲೂಕಿನಲ್ಲಿ ಮನೆ ಕುಸಿದು ಬಿದ್ದಿದೆ. ಎನ್.ಆರ್.ಪುರ ತಾಲೂಕಿನ ಖಾಂಡ್ಯಾ ಹೋಬಳಿಯ ಚಾಕಲುಮನೆ ಮನೆ ಗ್ರಾಮದ ರಮೇಶ್ ಎಂಬುವರ ಮನೆ ಮಳೆಗೆ ಕುಸಿದು ಬಿದ್ದಿದೆ. ಮನೆ ಸಂಪೂರ್ಣ ಬಿದಿರಿನಿಂದ ಕಟ್ಟಿದ್ದ ಮನೆಯಾಗಿದ್ದು ಕಳೆದ 20 ವರ್ಷಗಳಿಂದ ಅದೇ ಮನೆಯಲ್ಲಿ ವಾಸವಿದ್ದರು. ಕಳೆದ ಎರಡು ದಿನಗಳಿಂದ ಮಲೆನಾಡಲ್ಲಿ ಸುರಿಯುತ್ತಿರುವ ಮಳೆ, ಬೀಸುತ್ತಿರುವ ಗಾಳಿಗೆ ಮನೆ ಕುಸಿದು ಬಿದ್ದಿದೆ. ಮನೆ ಸಂಪೂರ್ಣ ಮನೆ ಕುಸಿದು ಬೀಳುವ ಆತಂಕ ಮನೆಯವರಿಗೆ ಎದುರಾಗಿದೆ. ರಮೇಶ್ ಇಬ್ಬರು ಮಕ್ಕಳೊಡನೆ ಅದೇ ಮನೆಯಲ್ಲಿ ವಾಸವಿದ್ದಾರೆ. ರಮೇಶ್ ಪಂಚಾಯಿತಿ ನೀಡುವ ಮನೆಗೆ ಕಳೆದ 5 ವರ್ಷದಿಂದ 3 ಬಾರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈವರೆಗೆ ಮನೆ ಮಂಜೂರಾಗಿಲ್ಲ. ಇನ್ನು ತರೀಕೆರೆ ತಾಲೂಕಿನ ಸೀತಾಪುರ ಕಾವಲ್‍ನಲ್ಲಿ ಮನೆಯ ಗೋಡೆಗೆ ಶೀತ ಹೆಚ್ಚಾಗಿ ಬೀಸಿದ ಗಾಳಿಗೆ ಮನೆಯ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಸೀತಾಪುರಕಾವಲ್ ಗ್ರಾಮದ ನಟೇಶ್ ಎಂಬುವರ ಮನೆ ಮಧ್ಯಾಹ್ನ ಅಡುಗೆ ಮಾಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದಿದೆ. ಮನೆ ಭಾಗಶಃ ನಾಶವಾಗಿದೆ. ಮಳೆ-ಗಾಳಿ ಹೀಗೆ ಮುಂದುವರೆದರೆ ಉಳಿದಿರೋ ಅಲ್ಪಸ್ವಲ್ಪ ಕೂಡ ಕುಸಿದು ಬೀಳಲಿದೆ. ಮನೆಯಲ್ಲಿದ್ದ ಪಾತ್ರೆ ದವಸ-ಧಾನ್ಯಗಳು ನಾಶವಾಗಿವೆ. ಸ್ಥಳಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು