6:27 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

Chikkamagaluru | ಚಾರ್ಮಾಡಿ ಘಾಟ್‌ನಲ್ಲಿ ದುರ್ಘಟನೆ: 21 ವರ್ಷದ ಯುವಕ ಪ್ರಪಾತಕ್ಕೆ ಬಿದ್ದು ಗಂಭೀರ

12/08/2025, 15:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಕೊಟ್ಟಿಗೆಹಾರ ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್‌ನಲ್ಲಿ ಸೋಮವಾರ ಮಧ್ಯಾಹ್ನ ದುರಂತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು, ಚಕ್ ಮಕ್ಕಿ ಗ್ರಾಮದ ನಿವಾಸಿ ಮುಸಮ್ಮಿಲ್ (21) ಗಾಯಗೊಂಡಿದ್ದಾನೆ. ತಕ್ಷಣ ಸ್ಥಳೀಯರು ಮತ್ತು ಸ್ನೇಹಿತರು ಸಹಾಯಕ್ಕೆ ಧಾವಿಸಿ, ಅವನನ್ನು ಎತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮಂಗಳೂರು ಆಸ್ಪತ್ರೆಗೆ ರವಾನಿಸಿದರು.
ಚಾರ್ಮಾಡಿ ಘಾಟ್ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಭಾಗವಾಗಿದ್ದು, ಪ್ರವಾಸಿಗರು ಆಗಾಗ ಭೇಟಿ ನೀಡುವ ಸ್ಥಳವಾಗಿದೆ. ಮಳೆಗಾಲದಲ್ಲಿ ರಸ್ತೆ ಮತ್ತು ಪ್ರಪಾತದ ಅಂಚು ಜಾರುವಿಕೆ ಅಪಾಯವಾಗಿದೆ.
ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು