ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಮತ್ತೊಂದು ಮಂಗನಕಾಯಿಲೆ ಪ್ರಕರಣ ಪತ್ತೆ; ಕೊಪ್ಪ ಸರಕಾರಿ ಆಸ್ಪತ್ರೆಗೆ ದಾಖಲು
06/01/2026, 16:59
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡಿನಲ್ಲಿ ಮತ್ತೊಂದು ಕೆಎಫ್‌ಡಿ (ಮಂಗನ ಕಾಯಿಲೆ) ಪ್ರಕರಣ ಪತ್ತೆಯಾಗಿದೆ.
30 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ.
ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ಯುವಕನಲ್ಲಿ ಸೋಂಕು ಕಂಡುಬಂದಿದ್ದು,ಯುವಕನಿಗೆ ಕೊಪ್ಪ ಸರ್ಕಾರಿ ಆಸ್ಪತ್ರೆಯ ಕೆಎಫ್‌ಡಿ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈವರೆಗೆ ಜಿಲ್ಲೆಯಲ್ಲಿ ಇಬ್ಬರಲ್ಲಿ ಮಂಗನ ಕಾಯಿಲೆ ದೃಢವಾಗಿದೆ.
ಇನ್ನೊಬ್ಬ ರೋಗಿ ಬೇರೆ ಅನಾರೋಗ್ಯದ ಕಾರಣದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಎಫ್‌ಡಿ ಪ್ರಕರಣ ದೃಢವಾದ ಹಿನ್ನೆಲೆ,ಕಟ್ಟಿನಮನೆ ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮಸ್ಥರಿಗೆ ಗ್ರಾಮದ ಶುಚಿತ್ವ ಕಾಪಾಡಿಕೊಳ್ಳುವಂತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿಯೇ ನಡೆದಿದೆ.














