ಇತ್ತೀಚಿನ ಸುದ್ದಿ
ಚಿಕ್ಕಮಗಳೂರು | ತರೀಕೆರೆ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ ಗಂಭೀರ
10/11/2026, 16:44
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಸಂಬಂಧಿಕರ ಮನೆಗೆ ದೀಪಾವಳಿ ಹಬ್ಬಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ತಂದೆ-ಮಗಳು ತರೀಕೆರೆ ತಾಲೂಕಿನ ಭೈರಾಪುರ ಕ್ರಾಸ್ ಬಳಿ
ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪುತ್ರಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ದ್ರಾಕ್ಷಾಯಿಣಿ (20) ಮೃತ ದುರ್ದೈವಿ, ತಂದೆ ರಮೇಶ್ ಸ್ಥಿತಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೈಕ್ ನಿಯಂತ್ರಣ ತಪ್ಪಿ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ರಮೇಶ್ ಅವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಂದೆ- ಮಗಳು ಲಿಂಗದಹಳ್ಳಿ ಸಮೀಪದ ಶಾಂತಿನಗರ ನಿವಾಸಿಗಳು. ಶಾಂತಿನಗರದಿಂದ ಎಂ.ಸಿ.ಹಳ್ಳಿ ಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಎಂ.ಸಿ.ಹಳ್ಳಿ ಗ್ರಾಮದಲ್ಲಿದ್ದ ಚಿಕ್ಕಮ್ಮನ ಮಗಳ ಮನೆಗೆ ಅವರು ತೆರಳುತ್ತಿದ್ದರು.ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












