4:19 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

Chikkamagaluru | ಬೀರೂರು ಪಿಎಸ್‌ಐ ಪತ್ನಿ ಆತ್ಮಹತ್ಯೆ: ಕೌಟುಂಬಿಕ ಕಲಹ ಸಾವಿಗೆ ಕಾರಣ?

29/04/2026, 17:58

ಚಿಕ್ಕಮಗಳೂರು(reporterkarnataka.com): ಸಣ್ಣದೊಂದು ಕೌಟುಂಬಿಕ ವಿಚಾರ ತಾರಕಕ್ಕೇರಿ ಪೊಲೀಸ್ ಅಧಿಕಾರಿಯ ಪತ್ನಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಫಿನಾಡಿನಲ್ಲಿ ಸಂಭವಿಸಿದೆ. ಮಕ್ಕಳ ಬೇಸಿಗೆ ರಜೆಯ ವಿಚಾರಕ್ಕೆ ಶುರುವಾದ ಗಲಾಟೆ, ಕೊನೆಯಲ್ಲಿ ಮನೆಯೊಡತಿಯ ಪ್ರಾಣವನ್ನೇ ಬಲಿಪಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕರ್ತವ್ಯನಿರತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರ ಪತ್ನಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೀರೂರು ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿರುವ ತಿಪ್ಪೇಶ್ ಅವರ ಪತ್ನಿ ಪದ್ಮ (34) ಎಂಬುವವರೇ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡ ದುರ್ದೈವಿ. ಮೂಲತಃ ತುಮಕೂರು ಜಿಲ್ಲೆಯವರಾದ ಪದ್ಮ ಮತ್ತು ದಾವಣಗೆರೆ ಮೂಲದ ತಿಪ್ಪೇಶ್ ಅವರು ಈ ಹಿಂದೆ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಸುಖ ಸಂಸಾರ ನಡೆಸುತ್ತಿದ್ದ ಈ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

*ಊರಿಗೆ ಕರೆದುಕೊಂಡು ಹೋಗಲಿಕ್ಕೆ ಒಪ್ಪದ ಗಂಡ:*
ಇನ್ನು ಈ ಭೀಕರ ದುರಂತಕ್ಕೆ ಮಕ್ಕಳ ಬೇಸಿಗೆ ರಜೆಯ ವಿಚಾರವೇ ಮುಖ್ಯ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಮಕ್ಕಳಿಗೆ ಶಾಲಾ ರಜೆ ಇರುವುದರಿಂದ ಅವರನ್ನು ತಮ್ಮೂರಿನ ಕಡೆಗೆ ಕರೆದುಕೊಂಡು ಹೋಗುವಂತೆ ಅಥವಾ ಕಳಿಸಿಕೊಡುವಂತೆ ಪದ್ಮ ಅವರು ಪತಿಯ ಬಳಿ ಒತ್ತಾಯಿಸಿದ್ದರು ಎನ್ನಲಾಗಿದೆ. ಆದರೆ, ಇದೇ ವಿಚಾರವಾಗಿ ದಂಪತಿಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪತಿಯು ಮಕ್ಕಳನ್ನು ಊರಿಗೆ ಕಳಿಸಲು ಒಪ್ಪಲಿಲ್ಲ ಎಂಬ ಆಕ್ರೋಶ ಪದ್ಮ ಅವರಲ್ಲಿ ಮನೆಮಾಡಿತ್ತು.

*ಅಂತರ್ಜಾತಿ ವಿವಾಹವಾಗಿದ್ದ ಜೋಡಿ:*
ಇನ್ನು ಪತಿಯ ನಿರ್ಧಾರದಿಂದ ತೀವ್ರವಾಗಿ ಮನನೊಂದಿದ್ದ ಪದ್ಮ ಅವರು, ಕಳೆದ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. 12 ವರ್ಷಗಳ ಹಿಂದೆ ಪ್ರೀತಿಸಿ ಅಂತರ್ ಜಾತಿ ಮದುವೆಯಾಗಿದ್ದ ಜೋಡಿಯಲ್ಲಿ ನಡೆದ ಸಣ್ಣ ಮನಸ್ತಾಪವೊಂದು ಸಾವಿನಲ್ಲಿ ಅಂತ್ಯವಾಗಿದೆ. ಇದರಿಂದಾಗಿ ಇಬ್ಬರು ಪುಟಾಣಿ ಮಕ್ಕಳು ಅಮ್ಮನನ್ನ ಕಳೆದುಕೊಂಡಿದ್ದಾರೆ. ಈ ಘಟನೆ ಸಂಬಂಧ ಅಪ್ಪನೂ ಕೂಡ ಪೊಲೀಸ್ ವಿಚಾರಣೆಗೆಂದು ಜೈಲಿಗೆ ಹೋದಲ್ಲಿ ಅನಾಥವಾಗುತ್ತಾರೆ.
ಸದ್ಯ ಪದ್ಮ ಅವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲೇ ಇತ್ತು. ಅವರ ತವರು ಮನೆಯವರು ಸ್ಥಳಕ್ಕೆ ಆಗಮಿಸಿದ ನಂತರ ಶವವನ್ನು ಇಳಿಸಲಾಯಿತು. ಘಟನೆ ಸ್ಥಳಕ್ಕೆ ಸೋಕೋ ತಜ್ಞರು ಆಗಮಿಸಿ ಪರಿಶೀಲನೆ ನಡೆಸಲಾಯಿತು. ಪ್ರೀತಿಸಿ ಹಸೆಮಣೆ ಏರಿದ್ದ ದಂಪತಿಗಳ ನಡುವೆ ಸಣ್ಣ ವಿಚಾರಕ್ಕೆ ಶುರುವಾದ ಕಲಹವೊಂದು ಇಬ್ಬರು ಮಕ್ಕಳನ್ನು ತಾಯಿಯಿಲ್ಲದಂತೆ ಮಾಡಿದ್ದು, ಇಡೀ ಜನರ ತೀವ್ರ ವಿಷಾದಕ್ಕೆ ಕಾರಣವಾಗಿದೆ. ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು